Saturday, October 12, 2024

ಮುಡಾ ಪ್ರಕರಣ : ರಾಜ್ಯಪಾಲರ ಪ್ರಾಸಿಕ್ಯೂಷನ್‌ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮತ್ತೆ ಮುಂದೂಡಿದ ಹೈಕೋರ್ಟ್‌ !

ಜನಪ್ರತಿನಿಧಿ (ಬೆಂಗಳೂರು) : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು(ಸೋಮವಾರ) ಮತ್ತೆ ಮುಂದೂಡಿ ಆದೇಶಿಸಿದೆ.

ಸೆಪ್ಟೆಂಬರ್ 12ಕ್ಕೆ ಮುಂದಿನ ವಿಚಾರಣೆಯನ್ನು ನಿಗದಿ ಮಾಡಲಾಗಿದ್ದು, ಅಲ್ಲಿಯವರೆಗೂ ಸಿದ್ದರಾಮಯ್ಯಗೆ ಮತ್ತೆ ರಿಲೀಫ್ ಸಿಕ್ಕಂತಾಗಿದೆ.

ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠ ಈ ಅರ್ಜಿ ವಿಚಾರಣೆ ನಡೆಸುತ್ತಿದ್ದು, ಇಂದು ಸಹ ಸುಧೀರ್ಘ ವಿಚಾರಣೆ ನಡೆಯಿತು.

ಸಿಎಂ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶ ಪ್ರಶ್ನಿಸಿ ಸಿಎಂ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಸಂದರ್ಭ ಸರ್ಕಾರದ ಪರವಾಗಿ ವಾದ ಮಂಡಿಸಿದ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು, : 17 ಎ ಅಡಿ ಪ್ರಾಸಿಕ್ಯೂಷನ್ ಗೆ ಪೊಲೀಸರು ಅನುಮತಿ ಕೇಳಬಹುದು. ಅದಕ್ಕೂ ಮೊದಲು ತನಿಖಾಧಿಕಾರಿ ಪ್ರಾಥಮಿಕ ತನಿಖೆ ನಡೆಸಬೇಕು. ಪ್ರಾಥಮಿಕ ತನಿಖೆಯ ವಿವರವನ್ನು ಸಕ್ಷಮ ಪ್ರಾಧಿಕಾರಕ್ಕೆ ನೀಡಬೇಕು ಎಂದು ಹೇಳಿ ಲಲಿತಾ ಕುಮಾರಿ ಪ್ರಕರಣವನ್ನು ಉಲ್ಲೇಖಿಸಿದರು.

ಯಾವ ಪ್ರಕರಣದಲ್ಲಿ ಪ್ರಾಥಮಿಕ ತನಿಖೆ ಬೇಕೆಂಬುದನ್ನು ಸುಪ್ರೀಂಕೋರ್ಟ್ ಹೇಳಿದೆ. ಇದು 22 ವರ್ಷಕ್ಕಿಂತ ಹಳೆಯ ಪ್ರಕರಣ ಆಗಿರುವುದರಿಂದ ಪ್ರಾಥಮಿಕ ತನಿಖೆ ಅಗತ್ಯ ಇದೆ. 17 ಎ ಅಡಿಯಲ್ಲಿ ಕೇಂದ್ರ ಸರ್ಕಾರ ಮಾರ್ಗಸೂಚಿ ರೂಪಿಸಿದೆ ಎಂದು ಶಶಿಕಿರಣ್ ಶೆಟ್ಟಿ ತಿಳಿಸಿದರು.

ರಾಜ್ಯಪಾಲರು ತನಿಖಾಧಿಕಾರಿಯಿಂದ ವರದಿ ಪಡೆಯಬೇಕಿತ್ತು. ಸರ್ಕಾರಕ್ಕೆ ಶೋಕಾಸ್ ನೋಟಿಸ್ ನೀಡುವ ಬದಲು ವರದಿ ಪಡೆಯಬೇಕಿತ್ತು. ವರದಿಯ ಬಲವಿಲ್ಲದೇ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ಕೇಂದ್ರ ಸರ್ಕಾರದ 17ಎ ಮಾರ್ಗಸೂಚಿ ಆಧರಿಸಿ ಅಡ್ವೊಕೆಟ್ ಜನರಲ್ ವಾದ ಮಂಡಿಸಿದರು.

ಬಳಿಕ ಸಿಎಂ ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, ತಾವು ಸೆಪ್ಟೆಂಬರ್ 12ರಂದು ವಾದಿಸುವುದಾಗಿ ಕೋರ್ಟ್​ಗೆ ಮನವಿ ಮಾಡಿದರು. ಹೀಗಾಗಿ ಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಿದೆ.

ಪ್ರಕರಣದಲ್ಲಿ ಸಿಎಂ ವಿರುದ್ಧದ ದೂರುಗಳನ್ನು ಆಲಿಸಲು ಉದ್ದೇಶಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಯನ್ನು ಸಹ ಮುಂದಿನ ವಿಚಾರಣೆಯ ದಿನಾಂಕದವರೆಗೆ ಮುಂದೂಡುವಂತೆ ಆಗಸ್ಟ್ 19 ರ ಮಧ್ಯಂತರ ಆದೇಶವನ್ನು ನ್ಯಾಯಾಲಯವು ವಿಸ್ತರಿಸಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!