spot_img
Wednesday, April 1, 2026
spot_img

ಸುರಭಿ ಬೈಂದೂರು: ರಜತಯಾನ ಚಾಲನೆ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೈಂದೂರು: ಸಾಂಸ್ಕೃತಿಕ ರಂಗದಲ್ಲಿ ಅವಿರತವಾಗಿ ತೊಡಗಿಸಿಕೊಂಡು ಜನಮಾನಸದಲ್ಲಿ ಸ್ಥಾನ ಪಡೆದಿರುವ ಬೈಂದೂರು ಸುರಭಿ ಸಂಸ್ಥೆಯು ಹಲವು ಸಾಧನೆಯ ಮೈಲುಗಲ್ಲುಗಳನ್ನು ದಾಟಿ 25ನೇ ವರ್ಷದ ಸಂಭ್ರಮದಲ್ಲಿರುವುದು ಶ್ಲಾಘನಾರ್ಹ ಸಂಗತಿಯಾಗಿದೆ ಎಂದು ಬೈಂದೂರು ರೋಟರಿ ಕ್ಲಬ್ ಪೂರ್ವಾಧ್ಯಕ್ಷ, ಉದ್ಯಮಿ ಪ್ರಸಾದ್ ಪ್ರಭು ಶಿರೂರು ಹೇಳಿದರು.

ಅವರು ಶುಕ್ರವಾರ ಸುರಭಿ ರಿ. ಬೈಂದೂರು ಸಂಸ್ಥೆಯ ಬೆಳ್ಳಿಹಬ್ಬದ ಅಂಗವಾಗಿ ಸೆ.14ರಂದು ಆಯೋಜಿಸಲಾಗಿರುವ ರಜತಯಾನ -2024 ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿ ಗ್ರಾಮೀಣ ಭಾಗದಲ್ಲಿ ಸಾಂಸ್ಕೃತಿಕ ಚಟುವಟಿಕೆಗಳನ್ನು ಕೈಗೊಳ್ಳುವುದು ಸವಾಲಿನ ಕೆಲಸವಾಗಿದ್ದು ಸತತ ಆಸಕ್ತಿ ಹಾಗೂ ಬದ್ಧತೆಯಿಂದ ಮಾತ್ರ ಇದು ಸಾಧ್ಯವಾಗುತ್ತದೆ ಎಂದರು.

ಸುರಭಿ ಸಂಸ್ಥೆಯ ನೂತನ ಅಧ್ಯಕ್ಷ ಆನಂದ ಮದ್ದೋಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಲಕ್ಷ್ಮಣ ಕೊರಗ, ನಿಕಟಪೂರ್ವ ಅಧ್ಯಕ್ಷ ನಾಗರಾಜ ಪಿ. ಯಡ್ತರೆ ಉಪಸ್ಥಿತರಿದ್ದರು.

ನಿರ್ದೇಶಕ ಸುಧಾಕರ ಪಿ. ಬೈಂದೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ರಾಮಕೃಷ್ಣ ದೇವಾಡಿಗ ಉಪ್ಪುಂದ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!