spot_img
Wednesday, April 1, 2026
spot_img

ಕೊಲ್ಕತ್ತಾ ಅತ್ಯಾಚಾರ ಪ್ರಕರಣ : ಸುಪ್ರೀಂ ಆದೇಶದ ಹೊರತಾಗಿಯೂ ಪ್ರತಿಭಟನೆ ಮುಂದುವರಿಸಿದ ಕಿರಿಯ ವೈದ್ಯರು !

ಜನಪ್ರತಿನಿಧಿ (ನವ ದೆಹಲಿ) : ಇಂದು (ಮಂಗಳವಾರ) ಸಂಜೆಯೊಳಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸುಪ್ರೀಂ ಕೋರ್ಟ್‌ ನ ನಿರ್ದೇಶನದ ಹೊರತಾಗಿಯೂ ನ್ಯಾಯ ದೊರಕುವಲ್ಲಿಯವರೆಗೆ ಹೋರಾಟ ಮುಂದುವರಿಸುತ್ತೇವೆ ಎಂದು ಪಶ್ಚಿಮ ಬಂಗಾಳದ ಆರ್‌ ಜಿ ಕಾರ್‌ ಆಸ್ಪತ್ರೆಯಲ್ಲಿ ನಡೆದಿರುವ ಅತ್ಯಾಚಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರು ಪಟ್ಟು ಹಿಡಿದಿದ್ದಾರೆ.

ರಾಜ್ಯದ ಆರೋಗ್ಯ ಕಾರ್ಯದರ್ಶಿ ಹಾಗೂ ಡಿಎಚ್‌ಇ ರಾಜೀನಾಮೆಗೆ ಒತ್ತಾಯಿಸಿ ಇಂದು ಮಧ್ಯಾಹ್ನ ಸಾಲ್ಟ್‌ ಲೇಕ್‌ ನಲ್ಲಿರುವ ಆರೋಗ್ಯ ಇಲಾಖೆಯ ಪ್ರಧಾನ ಕಚೇರಿಯಾದ ಸ್ವಾಸ್ಥ್ಯ ಭವನಕ್ಕೆ ರ್ಯಾಲಿ ನಡೆಸುವುದಾಗಿಯೂ ಪ್ರತಿಭಟನ ನಿರತರು ಹೇಳಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ವೈದ್ಯ ವಿದ್ಯಾರ್ಥಿನಿಯ ಮೇಲೆ ಕೊಲೆ ಮತ್ತು ಅತ್ಯಚಾರವನ್ನು ಖಂಡಿಸಿ ಕಳೆದ ಒಂದು ತಿಂಗಳಿಂದ ಕಿರಿಯ ವೈದ್ಯರ ತಂಡ ಪ್ರತಿಭಟನೆ ನಡೆಸುತ್ತಿದ್ದಾರೆ. ನಿನ್ನೆ(ಸೋಮವಾರ) ಸುಪ್ರೀಂ ಕೋರ್ಟ್‌ ನಾಳೆ(ಮಂಗಳವಾರ) ಸಂಜೆಯೊಳಗೆ ಕರ್ತವ್ಯಕ್ಕೆ ಹಾಜರಾಗುವಂತೆ ಪ್ರತಿಭಟನಾ ನಿರತ ವೈದ್ಯರಿಗೆ ನಿರ್ದೇಶನ ನೀಡಿತ್ತು. ಕರ್ತವ್ಯಕ್ಕೆ ಹಾಜರಾಗದೇ ಇದ್ದಲ್ಲಿ ರಾಜ್ಯ ಸರ್ಕಾರ ಶಿಸ್ತು ಕ್ರಮ ತೆಗೆದುಕೊಳ್ಳಬಹುದು ಎಂದು ಕೂಡ ಸುಪ್ರೀಂ ಕೋರ್ಟ್‌ ಸೂಚನೆ ನೀಡಿತ್ತು. ಆದಾಗ್ಯೂ ಕಿರಿಯ ವೈದ್ಯರು ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!