Saturday, October 12, 2024

ರೇಣುಕಾಸ್ವಾಮಿ ಕೊ* ಪ್ರಕರಣ : ಚಾರ್ಜ್‌ ಶೀಟ್‌ನಲ್ಲಿರುವುದನ್ನು ಪ್ರಕಟಿಸಬೇಡಿ : ಮಾಧ್ಯಮಗಳಿಗೆ ಹೈಕೋರ್ಟ್‌ ಸೂಚನೆ

ಜನಪ್ರತಿನಿಧಿ (ಬೆಂಗಳೂರು) : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಉಳಿದ 17 ಆರೋಪಿಗಳ ವಿರುದ್ಧ 3,991 ಪುಟಗಳ ವಿವರವಾದ ಆರೋಪ ಪಟ್ಟಿ (ಚಾರ್ಜ್‌ ಶೀಟ್‌ )ಯನ್ನು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದು ಅದರಲ್ಲಿರುವ ಅಂಶಗಳ ಬಗ್ಗೆ ಈಗಾಗಲೇ ಸಾಕಷ್ಟು ವರದಿಗಳು ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿವೆ.

ಚಾರ್ಜ್ ಶೀಟ್ ನಲ್ಲಿರುವ ವರದಿಯನ್ನು ಪ್ರಕಟಿಸದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರಿ ನಟ ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ದರ್ಶನ್‌ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಾಲಯ ಆರೋಪ ಪಟ್ಟಿಯ ಯಾವುದೇ ಮಾಹಿತಿಯನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ಸೂಚನೆ ನೀಡಿದೆ.

ಜಾರ್ಜ್‌ ಶೀಟ್‌ ನಲ್ಲಿರುವ ಮಾಹಿತಿಯನ್ನು ಪ್ರಸಾರ ಮಾಡದಂತೆ ಅಥವಾ ಸುದ್ದಿ ಪ್ರಸರಿಸದಂತೆ ಹೈಕೋರ್ಟ್ ಮಾಧ್ಯಮ ಸಂಸ್ಥೆಗಳಿಗೆ ಸೂಚಿಸಿದ. ಕಳೆದ ತಿಂಗಳು ಆಗಸ್ಟ್ 27 ರಂದು ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ, ದರ್ಶನ್ ಅವರಿಗೆ ಸಂಬಂಧಿಸಿದ ಖಾಸಗಿ ಚಿತ್ರಗಳನ್ನು ಮಾಧ್ಯಮಗಳಲ್ಲಿ ಪ್ರದರ್ಶಿಸದಂತೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿ ಪ್ರತಿಬಂಧಕಾಜ್ಞೆ ತಂದಿದ್ದರು.

ಸದ್ಯ, ನಟ ದರ್ಶನ್‌ ಸಲ್ಲಿಸಿರುವ ಅರ್ಜಿಯನ್ನು ಉಲ್ಲೇಖಿಸಿ, ಆರೋಪ ಪಟ್ಟಿಯಲ್ಲಿರುವ ಮಾಹಿತಿ ಹಾಗೂ ಹರಿದಾಡುತ್ತಿರುವ ಕೆಲವು ಚಿತ್ರಗಳನ್ನು ಪ್ರದರ್ಶಿಸದಂತೆ ಸೂಚನೆ ನೀಡುವಂತೆ ಮನವಿ ಮಾಡಲಾಗಿತ್ತು. ಅದರಂತೆ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ಮುಂದಿನ ವಿಚಾರಣೆಯವರೆಗೂ ಆರೋಪ ಪಟ್ಟಿಯಲ್ಲಿರುವ ಮಾಹಿತಿಯನ್ನು ಪ್ರಸಾರ ಮಾಡದಂತೆ ಸೂಚಿಸಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!