spot_img
Wednesday, April 1, 2026
spot_img

ಎಂ ಐ ಟಿ ಕುಂದಾಪುರ 17ನೇ ಗ್ರಾಜುಯೇಷನ್ ಡೇ

ಕುಂದಾಪುರ : ಎಂ ಐ ಟಿ ಕುಂದಾಪುರದಲ್ಲಿ  17ನೇ ಬ್ಯಾಚ್ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ  ಸೆಪ್ಟೆಂಬರ್ 9 ರಂದು ಪದವಿ ಪ್ರದಾನ ಸಮಾರಂಭವನ್ನು ಏರ್ಪಡಿಸಲಾಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಲಾಯಿತು. ಮಿರಾಪ್ರ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ನ ಹಾರ್ಡ್‌ವೇರ್ ಇಂಜಿನಿಯರಿಂಗ್ ಉಪಾಧ್ಯಕ್ಷರಾದ  ವಿನೋದ್ ಜಾನ್ ಮುಖ್ಯ ಅತಿಥಿಯಾಗಿದ್ದರು.  ವಿನೋದ್ ಜಾನ್ ಅವರು ತಮ್ಮ ಪದವಿ ಪ್ರಧಾನ ಭಾಷಣದಲ್ಲಿ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಗುರಿಗಳನ್ನು ಹೊಂದಲು ಸಲಹೆ ನೀಡಿದರು ಮತ್ತು ಪ್ರಾಮಾಣಿಕತೆ, ವಿನಮ್ರತೆ ಮತ್ತು ಕಠಿಣ ಪರಿಶ್ರಮವು ಯಶಸ್ಸಿಗೆ ಪ್ರಮುಖವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ ಒರ್ಡ್ರಿಯೋ ಸಂಸ್ಥೆಯ ಸಂಸ್ಥಾಪಕ ಮತ್ತು ಸಿಇಒ ಸುಮಂತ್ ಶೆಟ್ಟಿ ಮಾತನಾಡಿ, ಪದವೀಧರರು ತಮ್ಮ ಗುರಿಗಳನ್ನು ತಲುಪಲು ಇನ್ನೂ ಕೆಲವು ವರ್ಷಗಳವರೆಗೆ ಕಲಿಯಬೇಕು ಎಂದು ಸಲಹೆ ನೀಡಿದರು.  ತಮ್ಮ ಕಂಪನಿಯಲ್ಲಿ ಕೆಲಸಮಾಡುತ್ತಿರುವ ಎಂ ಐ ಟಿ ಕುಂದಾಪುರದ ವಿದ್ಯಾರ್ಥಿಗಳ ಕಾರ್ಯವೈಖರಿಯನ್ನ ಹೊಗಳಿದರು.  ವೇದಿಕೆಯಲ್ಲಿರುವ  ಗೌರವಾನ್ವಿತರು ವಿದ್ಯಾರ್ಥಿ ಗಳಿಗೆ ಪದವಿ ಪ್ರಮಾಣ ಪತ್ರ ಹಾಗೂ ವಿವಿಧ ವಿಭಾಗಳಲ್ಲಿ ಉನ್ನತ ಅಂಕ ಪಡೆದವರಿಗೆ ಪದಕಗಳನ್ನು ವಿತರಿಸಿದರು. ಪ್ರಾಂಶುಪಾಲ ಡಾ.ಅಬ್ದುಲ್ ಕರೀಂ ಅವರು ಪದವಿ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಶ್ರಮವಹಿಸಿ ದುಡಿದು ತಮ್ಮ ಪಾಲಕರಿಗೆ, ಶಿಕ್ಷಕರಿಗೆ ಹಾಗೂ ವಿದ್ಯಾಸಂಸ್ಥೆಗೆ ಕೀರ್ತಿ ತರುವಂತೆ ತಿಳಿಸಿದರು.  ದೂರದೃಷ್ಟಿಯುಳ್ಳ, ಸ್ಥಾಪಕ ಅಧ್ಯಕ್ಷ, ದಿವಂಗತ  ಐ ಎಂ ಜಯರಾಮ ಶೆಟ್ಟಿ ಮತ್ತು ಪ್ರಸ್ತುತ  ಅಧ್ಯಕ್ಷರಾದ  ಸಿದ್ಧಾರ್ಥ ಜೆ ಶೆಟ್ಟಿ ಅವರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣವನ್ನು ಅಧ್ಯಯನ ಮಾಡಲು ಅದ್ಭುತ ಅವಕಾಶ ಒದಗಿಸಿದ್ದಕ್ಕೆ  ಶ್ಲಾಘಿಸಿದರು. ಪ್ರಸ್ತುತ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲದೆ ಹೊರ ರಾಜ್ಯಗಳ ವಿದ್ಯಾರ್ಥಿಗಳು ಓದುತ್ತಿದ್ದಾರೆಂದು ತಿಳಿಸಿದರು.

 ಎಂಐಟಿಕೆ ಯ ಉಪ ಪ್ರಾಂಶುಪಾಲ ಪ್ರೊ.ಮೆಲ್ವಿನ್ ಡಿಸೋಜಾ ಅವರು ಪದವೀಧರರಿಗೆ ಪ್ರಮಾಣ ವಚನ ಬೋಧಿಸಿದರು.     ಐಎಂಜೆ ಸಂಸ್ಥೆಗಳ ಬ್ರಾಂಡ್  ಬಿಲ್ಡಿಂ ನಿರ್ದೇಶಕ ಡಾ.ರಾಮಕೃಷ್ಣ ಹೆಗಡೆ, ಕಾರ್ಯಕ್ರಮ ಸಂಯೋಜಕರಾದ ಪ್ಲೇಸ್ಮೆಂಟ್ ಡೀನ್ ಪ್ರೊಫೆಸರ್ ಅಮೃತಮಾಲ ಎಲ್ಲಾ ವಿಭಾಗ ಮುಖ್ಯಸ್ಥರು, ಸಿಬ್ಬಂದಿಗಳು, ಪದವೀಧರರು ಮತ್ತು ಅವರ ಪೋಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪ್ರೊ. ಫರಾನಾ ಸಮಾರಂಭ ನಡೆಸಿಕೊಟ್ಟರು.   ಪ್ರಾಧ್ಯಾಪಕಿ ಶ್ರೀನಿಧಿ ಅತಿಥಿಗಳನ್ನು ಪರಿಚಯಿಸಿದರು. ಪ್ರಾಧ್ಯಾಪಕಿ ತಿಲಕಲಕ್ಷ್ಮಿ ಸ್ವಾಗತಿಸಿ, ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!