spot_img
Thursday, April 2, 2026
spot_img

ಶ್ರೀ ಚಿಕ್ಕಮ್ಮ ದೇವಿ ಯುವಕ ಮಂಡಲ (ರಿ) ಕಕ್ಕೇರಿ ಕಾಳಾವರ 15ನೇ ವರ್ಷದ ಗಣೇಶೋತ್ಸವ ಸಮಾರಂಭ

ಜನಪ್ರತಿನಿಧಿ (ಕಾಳಾವರ) : ಶ್ರೀ ಚಿಕ್ಕಮ್ಮ ದೇವಿ ಯುವಕ ಮಂಡಲ (ರಿ) ಕಕ್ಕೇರಿ ಕಾಳಾವರ 15ನೇ ವರ್ಷದ ಗಣೇಶೋತ್ಸವ ಸಮಾರಂಭದಲ್ಲಿ ಸಾಮಾಜಿಕ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಉಪನ್ಯಾಸಕ ಕಾಳಾವರ ಉದಯ ಕುಮಾರ ಶೆಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಳಾವರ ಗ್ರಾಮ ಪಂಚಾಯತ್ ಅಧ್ಯಕ್ಷ ಮಂಜುನಾಥ ಶೆಟ್ಟಿಗಾರ, ನಿವೃತ್ತ ಸಹಾಯಕ ಯುವಜನ ಸೇವಾ ಕ್ರೀಡಾಧಿಕಾರಿ ದಯಾನಂದ ಹೆಗ್ಡೆ, ನಿಕಟ ಪೂರ್ವ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾಮಚಂದ್ರ ನಾವಡ ಕಾಳಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಲಲಿತಾ ಕಕ್ಕೇರಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಮಂಜುನಾಥ ಶೆಟ್ಟಿಗಾರ 15 ವರ್ಷದಿಂದ ಗಣೇಶೋತ್ಸವ ಪೂಜೆ ಮಾಡಿದ ಅರ್ಚಕರಾದ ಸೂರ್ಯನಾರಾಯಣ ಹೇರ್ಳೆ, ಕಾಳಾವರ ಗ್ರಾಮದ ಆಶಾ ಕಾರ್ಯಕರ್ತೆಯರಾದ ಪ್ರೇಮ, ಸುಜಾತ, ರೇಣುಕಾ ಜೋಗಿ ಮತ್ತು ಸಮುದಾಯ ಆರೋಗ್ಯ ಅಧಿಕಾರಿ ಪ್ರಶಾಂತ ಇವರನ್ನು ಸಮಿತಿಯ ಪರವಾಗಿ ಸನ್ಮಾನಿಸಿದರು.

ಯುವಕ ಮಂಡಲದ ಅಧ್ಯಕ್ಷ ಸಂದೀಪ ಕೆ ಅತಿಥಿಗಳನ್ನು ಗೌರವಿಸಿದರು. ಗಣೇಶೋತ್ಸವ ಸಮಿತಿ ಸದಸ್ಯ ಬಸವ ಕುಲಾಲ ಸ್ವಾಗತಿಸಿದರು. ವಿಶ್ಲೇಶ ಧನ್ಯವಾದ ಸಮರ್ಪಿಸಿದರು. ನಿತ್ಯಾನಂದ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸ್ಥಳೀಯ ಮಕ್ಕಳಿಂದ ನೃತ್ಯ ಮತ್ತು ಯುವಕ ಮಂಡಳ ಸದಸ್ಯರಿಂದ ನಾಟಕ ನಡೆಯಿತು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!