spot_img
Wednesday, April 1, 2026
spot_img

ವಂಡ್ಸೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

ಈ ಸಂದರ್ಭದಲ್ಲಿ ವಂಡ್ಸೆ ಸ.ಮಾ.ಹಿ.ಪ್ರಾ.ಶಾಲೆ ವಿದ್ಯಾರ್ಥಿಗಳ ರಚನೆಯ ಇ-ಪತ್ರಿಕೆ ‘ಬೆಳಕು’ ಉದ್ಘಾಟನೆ ಮಾಡಲಾಯಿತು.
ವಂಡ್ಸೆ, ಸೆ.11: ವಂಡ್ಸೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಂಡ್ಸೆ ಇಲ್ಲಿ ಸೆ.11 ಬುಧವಾರ ನಡೆಯಿತು.
ವಂಡ್ಸೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿ‌ಎಂಸಿ ಅಧ್ಯಕ್ಷೆ ಡಾ. ಪೂರ್ಣಿಮಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಂಡ್ಸೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಅವಿನಾಶ್, ಉಪಾಧ್ಯಕ್ಷ ಗೋವರ್ಧನ್ ಜೋಗಿ, ಗ್ರಾ.ಪಂ ಸದಸ್ಯ, ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ ಅಡಿಕೆಕೊಡ್ಲು, ಗ್ರಾಮ ಪಂಚಾಯಿತಿ ಸದಸ್ಯೆ ಶಶಿಕಲಾ ಎಸ್ ವಂಡ್ಸೆ, ಶ್ರೀ ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಕೋಶಾಧಿಕಾರಿ ಗಿಳಿಯಾರು ಶ್ರೀಧರ್ ಶೆಟ್ಟಿ, ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್‌ನ ಟ್ರಸ್ಟಿ ಅನಂದ ಶೆಟ್ಟಿ ಸಬ್ಲಾಡಿ, ಗ್ರಾ.ಪಂ. ಮಾಜಿ ಸದಸ್ಯ ಗುಂಡು ಪೂಜಾರಿ ಹರವರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂದೇಶ ಶೆಟ್ಟಿ, ಇಡೂರು ಕುಂಜ್ಞಾಡಿ ಗ್ರಾ.ಪಂ.ಅಧ್ಯಕ್ಷೆ ಆಶಾ ಆಚಾರ್ಯ, ಚಿತ್ತೂರು ಗ್ರಾ.ಪಂ ಅಧ್ಯಕ್ಷ ರವೀಂದ್ರ ಶೆಟ್ಟಿ, ವಂಡ್ಸೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಹಾಗೂ ಕರ್ಕುಂಜೆ, ಹೊಸಾಡು, ಕೊಲ್ಲೂರು ಸಿ.ಆರ್.ಪಿಗಳು ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡಿದರು. ಈ ಸಂದರ್ಭದಲ್ಲಿ ವಂಡ್ಸೆ ಸ.ಮಾ.ಹಿ.ಪ್ರಾ.ಶಾಲೆ ವಿದ್ಯಾರ್ಥಿಗಳ ರಚನೆಯ ಇ-ಪತ್ರಿಕೆ ‘ಬೆಳಕು’ ಉದ್ಘಾಟನೆ ಮಾಡಲಾಯಿತು.
ಪ್ರತಿಭಾ ಕಾರಂಜಿಯ ನೋಡಲ್ ಹಾಗೂ ಶಿಕ್ಷಣ ಸಂಯೋಜಕರಾದ ಸತ್ಯನಾ ಕೊಡೇರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಎಂ ನಾಗರಾಜ್ ಶೆಟ್ಟಿ ಸ್ವಾಗತಿಸಿದರು. ಆತಿಥೇಯ ಶಾಲೆಯ ಮುಖ್ಯ ಶಿಕ್ಷಕ ಸದಾಶಿವ ಕೆಂಚನೂರು ವಂದಿಸಿದರು. ಶಾಲೆಯ ದೈಹಿಕ ಶಿಕ್ಷಕ ರಾಜು ಎನ್ ಕಾರ್ಯಕ್ರಮ ನಿರೂಪಿಸಿದರು. ಶಾಲೆಯ ಎಲ್ಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!