Saturday, October 12, 2024

ಬಿಜೆಪಿ ಸರ್ಕಾರದ ಹಗರಣಗಳ ತನಿಖೆ | ವಾರದೊಳಗೆ ಸಮಿತಿ ಸಭೆ : ಡಾ. ಜಿ. ಪರಮೇಶ್ವರ್‌

ಜನಪ್ರತಿನಿಧಿ (ಬೆಂಗಳೂರು) : ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳನ್ನು ಬೇರೆ ಬೇರೆ ತನಿಖಾ ಸಂಸ್ಥೆಗಳು ನಡೆಸುತ್ತಿದ್ದು, ಈ ಪ್ರಕರಣಗಳ ತನಿಖೆಯ ಪ್ರಗತಿ ಪರಿಶೀಲನೆಗೆ ವಾರದೊಳಗೆ ಸಮಿತಿ ಸಭೆ ನಡೆಸುತ್ತೇನೆ ಎಂದು ಸಮಿತಿಯ ಅಧ್ಯಕ್ಷರಾಗಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದರು.

ವರದಿಗಾರರಿಗೆ ಸ್ಪಂದಿಸಿ ಮಾತನಾಡಿದ ಅವರು, ಎಲ್ಲಾ ಹಗರಣಗಳ ಪ್ರಕರಣಗಳನ್ನು ಗುರುತಿಸಿದ್ದೇವೆ. ಅವುಗಳ ತನಿಖೆ ಯಾವ ಹಂತದಲ್ಲಿವೆ ಎನ್ನುವುದನ್ನು ಪರಿಶೀಲಿಸಿ ಸಚಿವ ಸಂಪುಟಕ್ಕೆ ವರದಿ ಸಲ್ಲಿಸುತ್ತೇವೆ ಎಂದು ಅವರು ಹೇಳಿದರು.

ಶೀಘ್ರವಾಗಿ ತನಿಖೆ ನಡೆಯಬೇಕು ಎಂಬ ದೃಷ್ಟಿಯಲ್ಲಿ ಮುಖ್ಯಮಂತ್ರಿಗಳು ಸಮಿತಿಯನ್ನು ರಚಿಸಿದ್ದಾರೆ. ಪೊಲೀಸ್‌ ಇಲಾಖೆಯಲ್ಲಿ ಬಾಕಿ ಇರುವ ಪ್ರಕರಣಗಳ ಪ್ರಗತಿ ಪರಿಶೀಲನೆ ಸಂದರ್ಭ ಗಮನಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ವಿಚಾರ ಸಚಿವ ಸಂಪುಟ ಸಭೆಯ ಗಮನಕ್ಕೆ ಬಂದ ಬಳಿಕ ಶೀಘ್ರದಲ್ಲಿ ಮಾಡಲು ಮುಖ್ಯಮಂತ್ರಿಗಳು ಸಮಿತಿ ರಚಿಸಿದ್ದಾರೆಂದು ಹೇಳಿದ್ದಾರೆ.

ಇನ್ನು, ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಯ ಪ್ರಗತಿ, ಸಮನ್ವಯ ಮುಂತಾದ ಕಾರ್ಯಗಳಿಗೆ ಸಂಬಂಧಿಸಿದಂತೆ ಕ್ರಮವಹಿಸಲು ಸಚಿವರಾದ ಡಾ.ಜಿ. ಪರಮೇಶ್ವರ, ಎಚ್.ಕೆ ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಮತ್ತು ಸಂತೋಷ್ ಲಾಡ್ ಅವರನ್ನೊಳಗೊಂಡ ಸಮಿತಿಯನ್ನು ರಚಿಸಿ, ಆದೇಶಿಸಲಾಗಿದೆ. ಈ ಸಮಿತಿಯು ಮುಂದಿನ ಎರಡು ತಿಂಗಳುಗಳ ಒಳಗೆ ತನಗೆ ವಹಿಸಿರುವ ಜವಾಬ್ದಾರಿಯನ್ನು ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ನಿನ್ನೆ (ಮಂಗಳವಾರ) ಸೂಚಿಸಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!