Saturday, October 12, 2024

ಕಂದಾವರ ಕೆರೆಯಲ್ಲಿ ಮುಳುಗಿ ಈರ್ವರ ಸಾವು ಪ್ರಕರಣ : ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂ. ಪರಿಹಾರ ಹಸ್ತಾಂತರ.

ಜನಪ್ರತಿನಿಧಿ (ಕುಂದಾಪುರ) : ಕಳೆದ ವರ್ಷ ಮೇ ತಿಂಗಳಲ್ಲಿ ಕಂದಾವರ ಸಮೀಪದ ಕೆರೆಯಲ್ಲಿ ಮುಳುಗುತ್ತಿದ್ದ ಮೂವರು ಮಕ್ಕಳನ್ನು ರಕ್ಷಿಸಿ, ನಾಲ್ಕನೇಯವರನ್ನು ರಕ್ಷಿಸುವ ವೇಳೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಾಳಾವರ ಗ್ರಾಮದ ರಾಜೇಂದ್ರ ಶೆಟ್ಟಿಗಾರ ಎನ್ನುವವರು ಹಾಗೂ ಶಂಕರನಾರಾಯಣ ಗ್ರಾಮದ ಸಂಕಾಪುರದ ಭರತ್‌ ಶೆಟ್ಟಿಗಾರ್‌ ಕಂದಾವರದ ಕೆರೆಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಮುಳುಗಿ ಮೃತಪಟ್ಟಿದ್ದರು.

ಮೃತರ ಕುಟುಂಬದವರಿಗೆ ಮುಖ್ಯಮಂತ್ರಿಗಳ ಪರಿಹಾರದಿಂದ ತಲಾ ಎರಡು ಲಕ್ಷ ಪರಿಹಾರ ನೀಡುವಂತೆ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಆದೇಶಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಬ್ಲಾಕ್‌ ಕಾಂಗ್ರೆಸ್‌ ನ ಅಧ್ಯಕ್ಷ ಹರಿಪ್ರಸಾದ್‌ ಶೆಟ್ಟಿ ಕಾನ್ಮಕ್ಕಿ ಅವರು ಪರಿಹಾರ ಒದಗಿಸುವಂತೆ ವಿಧಾನ ಪರಿಷತ್‌ ಸದಸ್ಯ ಮಂಜುನಾಥ್‌ ಭಂಡಾರಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಮನವಿಗೆ ಸ್ಪಂದಿಸಿದ ಮಂಜುನಾಥ ಭಂಡಾರಿ ಅವರು, ಮುಖ್ಯಮಂತ್ರಿಗಳಿಗೆ ಪತ್ರ ಬರೆದು ವಿನಂತಿಸಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಕಚೇರಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನಾಲ್ಕು ಲಕ್ಷವನ್ನು ಜಿಲ್ಲಾಧಿಕಾರಿಗಳ ಖಾತೆಗೆ ವರ್ಗಾವಣೆ ಮಾಡಲಾಗಿತ್ತು.

ಇಂದು (ಬುಧವಾರ) ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಬಿಡುಗಡೆಗೊಂಡ ಪರಿಹಾರ ಧನವನ್ನು ತಹಶೀಲ್ದಾರರು ಗ್ರಾಮ ಆಡಳಿತಾಧಿಕಾರಿಗಳ ಮುಖೇನ ಮೃತರ ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ ಎಂದು ಹರಿಪ್ರಸಾದ್‌ ಶೆಟ್ಟಿ ಕಾನ್ಮಕ್ಕಿ ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!