Saturday, October 12, 2024

ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲದಿರುವಾಗ ಮುಂದೆ ಯಾರು ಮುಖ್ಯಮಂತ್ರಿ? ಎನ್ನುವ ಪ್ರಶ್ನೆಯೇ ಉದ್ಭವಿಸುವುದಿಲ್ಲ : ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲದಿರುವಾಗ ಮುಂದೆ ಯಾರು ಮುಖ್ಯಮಂತ್ರಿ? ಎನ್ನುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಎಲ್ಲರೂ ಹೇಳುತ್ತಿದ್ದಾರೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರ ಸಿದ್ದರಾಮಯ್ಯ ಇಂದು ಅರಣ್ಯ ಭವನದ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸುಮಾರು 21 ಹಗರಣಗಳು ನಡೆದಿದ್ದು, ಈ ಎಲ್ಲ ಹಗರಣಗಳ ತನಿಖೆಗೆ ತ್ವರಿತವಾಗಿ ಚಾಲನೆ ನೀಡಲು ಹಾಗೂ ಈ ಬಗ್ಗೆ ತೆಗೆದುಕೊಳ್ಳಬೇಕಾದ ಮುಂದಿನ ಕ್ರಮಗಳ ಬಗ್ಗೆ ಸಲಹೆ ನೀಡಲು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ  ಸಚಿವಸಂಪುಟದ ಉಪ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ ಸಚಿವರಾದ ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಹಾಗೂ ಎಚ್.ಕೆ.ಪಾಟೀಲ್ ರವರು ಸದಸ್ಯರಾಗಿದ್ದಾರೆ ಎಂದು ತಿಳಿಸಿದರು.

ಈ ಸಮಿತಿಗೆ ವರದಿಯನ್ನು ನೀಡಲು ಒಂದರಿಂದ ಎರಡು ತಿಂಗಳ ಅವಧಿಯನ್ನು ನೀಡಲಾಗಿದೆ. ಪಿಎಸ್‌ಐ ಹಗರಣ, 40% ಕಮಿಷನ್ ಹಗರಣ, ಕೋವಿಡ್ 19, ಬಿಟ್ ಕಾಯಿನ್ ಹಗರಣಗಳಿಗೆ ಮಾತ್ರ ತನಿಖಾ ಆಯೋಗಗಳನ್ನು ರಚಿಸಲಾಗಿದೆ. ಅದರಲ್ಲಿ ಕೋವಿಡ್- 19 ಬಗ್ಗೆ ತನಿಖಾ ಆಯೋಗ ಪೂರ್ವಭಾವಿ ವರದಿಯನ್ನು ನೀಡಿದ್ದು, ಅಧಿಕಾರಿಗಳ ಪರಿಶೀಲನೆಯ ನಂತರ ಈ ಬಗ್ಗೆ ಸಚಿವ ಸಂಪುಟದಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬಿಜೆಪಿಯವರು ನನ್ನ ಮೇಲೆ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ನಾವು ದ್ವೇಷದ ರಾಜಕಾರಣ ಮಾಡುವುದಿಲ್ಲ. ಆದರೆ ತಪ್ಪು ಮಾಡಿದವರ ಮೇಲೆ ಖಂಡಿತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಪಿಎಸ್ ಐ ಹಗರಣ- ಎಸ್ ಐಟಿ ಕ್ರಮಕ್ಕೆ ಸೂಚನೆ :
ಪಿಎಸ್ ಐ ಹಗರಣದ ತನಿಖೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಆಯೋಗವು ವರದಿಯನ್ನು ನೀಡಿದ್ದು, ಈ ಹಗರಣದ ಬಗ್ಗೆ ವಿಶೇಷ ತನಿಖಾ ತಂಡಕ್ಕೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.

ವಾಲ್ಮೀಕಿ ಹಗರಣ : ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ :
ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಹಾಗೂ ಕೇಂದ್ರ ಜಾರಿ ನಿರ್ದೇಶನಾಲಯದ ತನಿಖೆ ಮಾಡಿ ಚಾರ್ಜ್ ಶೀಟ್ ಸಲ್ಲಿಸಿದ್ದು, ಈ ಬಗ್ಗೆ ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!