Saturday, October 12, 2024

ದೇಶ ವಿಭಜಿಸಲು ಸಂಚು ರೂಪಿಸುವ ಶಕ್ತಿಗಳೊಂದಿಗೆ ನಿಲ್ಲುವುದು ರಾಹುಲ್ ಮತ್ತು ಕಾಂಗ್ರೆಸ್‌ ಗೆ ಅಭ್ಯಾಸವಾಗಿದೆ : ಅಮಿತ್‌ ಶಾ ಆಕ್ರೋಶ

ಜನಪ್ರತಿನಿಧಿ (ನವದೆಹಲಿ) : ರಾಹುಲ್ ಗಾಂಧಿ ಅಮೆರಿಕದಲ್ಲಿ ದೇಶ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು(ಬುಧವಾರ) ವಾಗ್ದಾಳಿ ಮಾಡಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ದೀರ್ಘವಾದ ಪೋಸ್ಟ್‌ ಮಾಡಿರುವ ಅಮಿತ್‌ ಶಾ, ರಾಹುಲ್ ಗಾಂಧಿಗೆ ತಮ್ಮ ವಿದೇಶಿ ಭೇಟಿಯ ಸಂದರ್ಭದಲ್ಲಿ ದೇಶ ವಿರೋಧಿ ಹೇಳಿಕೆ ನೀಡುವುದು “ಅಭ್ಯಾಸವಾಗಿದೆ” ಎಂದು ಟೀಕಿಸಿದ್ದಲ್ಲದೇ, ಅವರು ನಿಯಮಿತವಾಗಿ ದೇಶ ವಿರೋಧಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ದೇಶ ವಿಭಜಿಸಲು ಸಂಚು ರೂಪಿಸುವ ಶಕ್ತಿಗಳೊಂದಿಗೆ ನಿಲ್ಲುವುದು ಮತ್ತು ದೇಶ ವಿರೋಧಿ ಹೇಳಿಕೆಗಳನ್ನು ನೀಡುವುದು  ಅಭ್ಯಾಸವಾಗಿದೆ. ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ನ ದೇಶವಿರೋಧಿ ಮತ್ತು ಮೀಸಲಾತಿ ವಿರೋಧಿ ಅಜೆಂಡಾವನ್ನು ಬೆಂಬಲಿಸುತ್ತಿರುವುದಿರಲಿ ಅಥವಾ ವಿದೇಶಿ ವೇದಿಕೆಗಳಲ್ಲಿ ಭಾರತ ವಿರೋಧಿ ಹೇಳಿಕೆಗಳನ್ನು ನೀಡುವುದಿರಲಿ, ರಾಹುಲ್ ಗಾಂಧಿ ಯಾವಾಗಲೂ ರಾಷ್ಟ್ರದ ಭದ್ರತೆಗೆ ಬೆದರಿಕೆ ಹಾಕುತ್ತಿದ್ದಾರೆ ಮತ್ತು ಭಾವನೆಗಳಿಗೆ ಧಕ್ಕೆ ತರುತ್ತಿದ್ದಾರೆ ಎಂದು ಅಮಿತ್ ಶಾ ಆರೋಪಿಸಿದ್ದಾರೆ.

ಇನ್ನು, ರಾಹುಲ್ ಗಾಂಧಿಯ ಇತ್ತೀಚಿನ ಹೇಳಿಕೆಗಳು ಪ್ರಾದೇಶಿಕತೆ, ಧರ್ಮ ಮತ್ತು ಭಾಷೆಯ ಆಧಾರದ ಮೇಲೆ ವಿಭಜನೆಯನ್ನು ಪ್ರಚೋದಿಸುವ ಕಾಂಗ್ರೆಸ್‌ನ ತಂತ್ರವನ್ನು ಬಹಿರಂಗಪಡಿಸುತ್ತದೆ ಎಂದವರು ಟೀಕಿಸಿದ್ದಾರೆ.

ಕಾಂಗ್ರೆಸ್‌ನ ಮೀಸಲಾತಿ ವಿರೋಧಿ ನಿಲುವನ್ನು ರಾಹುಲ್ ಗಾಂಧಿ ಮೀಸಲಾತಿ ರದ್ದತಿಯನ್ನು ಪ್ರತಿಪಾದಿಸುವ ಮೂಲಕ ಬಹಿರಂಗಪಡಿಸಿದ್ದಾರೆ ಎಂದು ಅಮಿತ್ ಶಾ ತಿರುಗೇಟು ನೀಡಿದ್ದಾರೆ.

“ಬಿಜೆಪಿ ಅಧಿಕಾರದಲ್ಲಿರುವವರೆಗೂ ಯಾರೂ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ ಅಥವಾ ರಾಷ್ಟ್ರದ ಭದ್ರತೆಯೊಂದಿಗೆ ಯಾರೂ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ನಾನು ರಾಹುಲ್ ಗಾಂಧಿಗೆ ಹೇಳಲು ಬಯಸುತ್ತೇನೆ ಎಂದು ಅಮಿತ್ ಶಾ ಪೋಸ್ಟ್ ನಲ್ಲಿ ಉಲ್ಲೇಖಿಸಿದ್ದಾರೆ.

Standing with forces that conspire to divide the country and making anti-national statements have become a habit for Rahul Gandhi : ಅಮಿತ್‌ ಶಾ

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!