Sunday, October 13, 2024

ನಾಗಮಂಗಲ ಗಣೇಶ ವಿಸರ್ಜನೆ ವೇಳೆ ಗಲಭೆ : ದುರುಳರು ಯಾರೇ ಆದರೂ ನಿರ್ದಾಕ್ಷಿಣ್ಯ ಕ್ರಮ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಬೆಂಗಳೂರು) : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆಯ ಸಂದರ್ಭದಲ್ಲಿ ನಡೆದಿರುವ ಕಲ್ಲು ತೂರಾಟವು ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯವಾಗಿದ್ದು, ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟವಾಗಿರುವ ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ನಡೆದಿರುವ ಕಲ್ಲುತೂರಾಟ ಸಮಾಜದ ಶಾಂತಿ, ನೆಮ್ಮದಿಗೆ ಧಕ್ಕೆತರುವ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದು ನಿಸ್ಸಂಶಯ. ಇದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಈಗಾಗಲೇ 50ಕ್ಕೂ ಅಧಿಕ ಜನರನ್ನು ಬಂಧಿಸಲಾಗಿದ್ದು, ಸಮಾಜದ ಶಾಂತಿ, ಸುವ್ಯವಸ್ಥೆ ಕಾಪಾಡುವುದೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.

ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಗಲಭೆ, ಗಲಾಟೆ, ಹಿಂಸಾಚಾರಗಳು ನಡೆಯದೆ ಸರ್ವಜನಾಂಗದ ಶಾಂತಿಯ ತೋಟದಂತಿದ್ದ ನಾಡನ್ನು, ಧಾರ್ಮಿಕ ನೆಲೆಗಟ್ಟಿನಲ್ಲಿ ವಿಭಜಿಸಲು ಯತ್ನಿಸುವ ದುರುಳರು ಯಾವುದೇ ಜಾತಿ, ಧರ್ಮದವರಾಗಿರಲಿ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಪ್ರಚೋದನೆಗಳಿಗೆ ಒಳಗಾಗದೆ ಶಾಂತಿ, ಸಂಯಮ ಕಾಪಾಡಿಕೊಳ್ಳುವ ಮೂಲಕ ನಮ್ಮೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡುತ್ತೇನೆಂದು ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!