Saturday, October 12, 2024

ಪಶ್ಚಿಮ ಬಂಗಾಳ ಅತ್ಯಾಚಾರ ಪ್ರಕರಣ : ಧರಣಿ ಮುಂದುವರಿಸಿದ ಕಿರಿಯ ವೈದ್ಯರು !

ಜನಪ್ರತಿನಿಧಿ (ನವ ದೆಹಲಿ) : ಪಶ್ಚಿಮ ಬಂಗಾಳದ ಆರ್‌. ಜಿ ಕರ್‌ ಮೆಡಿಕಲ್‌ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ವೈದ್ಯ ವಿದ್ಯಾರ್ಥಿನಿ  ಮೇಲೆ ಅತ್ಯಚಾರ ಮತ್ತು ಕೊಲೆ ಪ್ರಕರಣವನ್ನು ವಿರೋಧಿಸಿ ಕರ್ತವ್ಯಕ್ಕೆ ಹಾಜರಾಗದೆ ಕಿರಿಯ ವೈದ್ಯರು, ಪಶ್ಚಿಮ ಬಂಗಾಳದ ಆರೋಗ್ಯ ಇಲಾಖೆಯ ಕೇಂದ್ರ ಕಚೇರಿ ಮುಂಭಾಗದಲ್ಲಿ ಧರಣಿ ಸತ್ಯಾಗ್ರಹ ಮುಂದುವರಿಸಿದ್ದಾರೆ.

ಕೇಂದ್ರ ಆರೋಗ್ಯ ಕಚೇರಿಯ ಮುಂಭಾಗದಲ್ಲಿ ಸುಪ್ರೀಂ ಕೋರ್ಟ್‌ ನ ಆದೇಶವನ್ನು ಮೀರಿ ಕಿರಿಯ ವೈದ್ಯರು ಧರಣಿಯನ್ನು ಮುಂದುವರಿಸಿದ್ದಾರೆ.

ಮಾತುಕತೆಗೆ ಕಿರಿಯ ವೈದ್ಯರಯ ಮುಂದಿಟ್ಟಿದ್ದ ಕೆಲವು ಷರತ್ತುಗಳನ್ನು ಪಶ್ಚಿಮ ಬಂಗಾಳ ಸರ್ಕಾರ ನಿರಾಕರಿಸಿದ ಹಿನ್ನೆಲೆಯಲ್ಲಿ ನಿನ್ನೆ(ಬುಧವಾರ) ಸಂಜೆ ನಿಗದಿಯಾಗಿದ್ದ ಸಭೆ ನಡೆಯಲಿಲ್ಲ. ಕರ್ತವ್ಯಕ್ಕೆ ಹಾಜರಾಗುವಂತೆ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತು ನೀಡದ ಕಿರಿಯ ವೈದ್ಯರು ಧರಣಿ ಮುಂದುವರಿಸಿದ್ದಾರೆ.

ಪಶ್ಚಿಮ ಬಂಗಾಳ ಸರ್ಕಾರ ವೈದ್ಯರನ್ನು ಮಾತುಕತೆಗೆ ಆಹ್ವಾನಿಸಿತ್ತು. ಆದರೇ ಕಿರಿಯ ವೈದ್ಯರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಮ್ಮುಖದಲ್ಲೇ ಚರ್ಚೆ ಆಗಬೇಕು ಹಾಗೂ ಮಾತುಕತೆಯನ್ನು ನೇರ ಪ್ರಸಾರ ಮಾಡುವಂತೆ ಷರತ್ತನ್ನು ಕಿರಿಯ ವೈದ್ಯರ ತಂಡ ಹಾಕಿತ್ತು. ಈ ಷರತ್ತುಗಳನ್ನು ನಿರಾಕರಿಸಿದ ಬೆನ್ನಲ್ಲೆ ಧರಣಿಯನ್ನು ಮುಂದುವರಿಸಿದ್ದಾರೆ.

ತಮ್ಮ ಬೇಡಿಕೆ ಪೂರೈಕೆಯಾಗುವವರೆಗೆ ಧರಣಿ ನಿಲ್ಲಿಸುವುದಿಲ್ಲ ಎಂದು ಧರಣಿ ನಿರತ ಒಬ್ಬ ವೈದ್ಯರು ಗುಂಪಿನ ಮುಖ್ಯಸ್ಥರು ರಾಷ್ಟ್ರೀಯ ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿರುವುದಾಗಿ ವರದಿಯಾಗಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!