spot_img
Wednesday, January 22, 2025
spot_img

ನಾಗಮಂಗಲ ಗಣೇಶ ವಿಸರ್ಜನೆ ವೇಳೆ ಗಲಭೆ | ಇದು ಕಾಂಗ್ರೆಸ್ ಸರ್ಕಾರದ ವೈಫಲ್ಯವೆನ್ನುವುದು ಸ್ಪಷ್ಟ : ಆರ್.‌ ಅಶೋಕ್‌ ಆಕ್ರೋಶ

ಜನಪ್ರತಿನಿಧಿ (ಬೆಂಗಳೂರು) : ನಾಗಮಂಗಲದಲ್ಲಾಗಿರುವ ಘಟನೆಯನ್ನು ಗೃಹ ಸಚಿವರು ಸಣ್ಣ ಘಟನೆ ಎಂದಿರುವುದು ಎಷ್ಟರ ಮಟ್ಟಿಗೆ ಸರಿ ? ಎಂದು ವಿಧಾನ ಸಭೆಯ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಪ್ರಶ್ನಿಸಿದ್ದಾರೆ.

ವರದಿಗಾರರಿಗೆ ಈ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅಶೋಕ್‌, ರಾಜ್ಯ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಇಂತಹ ಗಲಭೆಗಳು ಹಲವಾರು ಬಾರಿ ನಡೆಯುತ್ತಿದೆ. ಕಲ್ಲು ತೂರಾಟ ಮಾಡಿ, ಗಲಾಟೆ ಮಾಡಿರುವವರನ್ನು ಬಂಧಿಸದೆ, ಹಿಂದೂಗಳನ್ನು ಬಂಧಿಸಿದ್ದಾರೆ. ಈ ಸರ್ಕಾರ ಯಾರನ್ನು ಓಲೈಸುತ್ತಿದೆ ಎಂಬುದು ತಿಳಿಯದಾಗಿದೆ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯವೆನ್ನುವುದು ಸ್ಪಷ್ಟ. ಕಲ್ಲು ತೂರಾಟ ಮಾಡಿದವರನ್ನು ಬಂಧಿಸಬೇಕೆಂದು ಅವರು ಒತ್ತಾಯಿಸಿದ್ದಲ್ಲದೇ, ಈ ಘಟನೆ ಕಾಂಗ್ರೆಸ್‌ ಗೆ ಎಚ್ಚರಿಕೆಯ ಗಂಟೆ ಎಂದೂ ಹೇಳಿದ್ದಾರೆ.

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!