spot_img
Sunday, February 15, 2026
spot_img

ಖ್ಯಾತ ವಾಗ್ಮಿ, ಸಾಹಿತಿ ಪ್ರೊ.ಕೃಷ್ಣೆಗೌಡ ಮೈಸೂರು ಅವರಿಗೆ ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ

ಕೋಟ : ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ (ರಿ.)ಕೋಟದ ಸಹಭಾಗಿತ್ವದಲ್ಲಿ ಕಳೆದ ಹತ್ತೊಂಭತ್ತು ವರುಷಗಳಿಂದ ಕಾರಂತರ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡುತ್ತಾ ಬಂದಿದೆ. ೨೦೨೪ರ ಸಾಲಿನಲ್ಲಿ ಖ್ಯಾತ ವಾಗ್ಮಿ, ಸಾಹಿತಿ ಪ್ರೊ.ಕೃಷ್ಣೆಗೌಡ ಮೈಸೂರು ಅವರನ್ನು ಆಯ್ಕೆ ಮಾಡಲಾಗಿದೆ.

ಹಲವು ದಶಕಗಳಿಂದ ಯುವ ಜನಾಂಗಕ್ಕೆ ಪ್ರೇರಣಾತ್ಮಕ ಮಾತುಗಳಿಂದ ಭರವಸೆ ತುಂಬಿ ಹೊಸದೆಸೆಯ ಬೆಳಕಾಗಿರುವ, ಕನ್ನಡ ಮಾತುಗಾರಿಕೆಗೆ ಹೊಸ ನೆಲೆಕಟ್ಟು ಮತು ಚೌಕಟ್ಟು ನೀಡಿದ ಅಮೂಲ್ಯ ಸೇವೆಯನ್ನು ಹಾಗೂ ಅವರು ಏರಿದ ಸಾಧನೆಯ ಮೆಟ್ಟಿಲುಗಳನ್ನು ಪರಿಗಣಿಸಿ ಈ ವರ್ಷ ಡಾ|| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಈಗಾಗಲೇ ವೀರಪ್ಪ ಮೊಯ್ಲಿ, ವೆಂಕಟಾಚಲ, ಕೆ.ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಶ್ರೀಮತಿ ಜಯಶ್ರೀ, ಶ್ರೀ ಮೋಹನ ಆಳ್ವ, ಶ್ರೀಮತಿ ಸಾಲು ಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿ, ಸದಾನಂದ ಸುವರ್ಣ, ಡಾ | ಬಿ. ಎಂ ಹೆಗ್ಡೆ, ಶ್ರೀಪ್ರಕಾಶ್ ರೈ, ಶ್ರೀಪಡ್ರೆ, ಶ್ರೀಮತಿ ಕವಿತಾ ಮಿಶ್ರ, ನಾಡೋಜ ಡಾ.ಎಸ್.ಎಲ್.ಭೈರಪ್ಪ , ಗಿರೀಶ್ ಭಾರದ್ವಜ್, ರಮೇಶ್ ಅರವಿಂದ್, ಡಾ.ವಿದ್ಯಾಭೂಷಣ್ ಅವರಿಗೆ ಪ್ರದಾನ ಮಾಡಲಾಗಿರುತ್ತದೆ.

ಅಕ್ಟೋಬರ್ ಹತ್ತರಂದು ಡಾ. ಕೋಟ ಶಿವರಾಮ ಕಾರಂತರ ಜನ್ಮ ದಿನ ಡಾ. ಕಾರಂತ ಹುಟ್ಟೂರ ಪ್ರಶಸ್ತಿಯನ್ನು ಇವರಿಗೆ ಪ್ರದಾನ ಮಾಡಲಾಗುತ್ತದೆ ಎಂದು ಡಾ|| ಶಿವರಾಮ ಕಾರಂತ ಪ್ರತಿಷ್ಠಾನ (ರಿ)ಕೋಟದ ಕಾರ್ಯಾಧ್ಯಕ್ಷ ಆನಂದ ಸಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷ ಕೆ.ಸತೀಶ್ ಕುಂದರ್, ಆಯ್ಕೆ ಸಮಿತಿ ಸದಸ್ಯ ಯು.ಎಸ್ ಶೆಣೈ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶ್ರೀಮತಿ ಪೂರ್ಣಿಮಾ, ಪಿ.ಡಿ.ಓ ರವೀಂದ್ರ ರಾವ್ , ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಶ್ರೀ ನರೇಂದ್ರ ಕುಮಾರ್ ಕೋಟ ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!