Saturday, October 12, 2024

ನಾಗಮಂಗಲ ಗಲಭೆ | ಕಾಂಗ್ರೆಸ್ ನ ಮತಬ್ಯಾಂಕ್ ಆಧಾರಿತ ಪಕ್ಷಪಾತ ನಡೆ ಕರುನಾಡನ್ನು ದಹಿಸುತ್ತಿದೆ : ವಿಜಯೇಂದ್ರ ಆಕ್ರೋಶ

ಜನಪ್ರತಿನಿಧಿ (ಬೆಂಗಳೂರು) : ನಾಗಮಂಗಲದಲ್ಲಿ ಗಣಪತಿ ವಿಸರ್ಜನೆಯ ವೇಳೆ ಕಲ್ಲುತೂರಾಟ ನಡೆಸಿರುವ ಹಿಂದೂ ವಿರೋಧಿ ಮತಾಂದ ಕಿಡಿಗೇಡಿಗಳ ಅಟ್ಟಹಾಸದಿಂದ ಉದ್ಭವಿಸಿರುವ ಪ್ರಕ್ಷುಬ್ಧ ಪರಿಸ್ಥಿತಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದ್ದು ಈ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಹೇಳಿದ್ದಾರೆ.

ಈ ಹಿಂದಿನ ವರ್ಷವೂ ಪುಂಡರು ಇದೇ ರೀತಿ ವರ್ತಿಸಿದ್ದ ಘಟನೆಯ ಹಿನ್ನೆಲೆಯಲ್ಲಿ  ಪೊಲೀಸರು  ಮುಂಜಾಗ್ರತೆಯ ಕಟ್ಟೆಚ್ಚರ ವಹಿಸವಲ್ಲಿ ಎಚ್ಚರ ತಪ್ಪಿರುವುದು ಸ್ಪಷ್ಟವಾಗಿದೆ ಎಂದು ಅವರು ಕಿಡಿ ಕಾರಿದ್ದಾರೆ.

ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸಿರುವ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರದ ಆಡಳಿತ ಅವಧಿಯಲ್ಲಿ ನಮಗೆ ರಕ್ಷಣೆ ಸಿಗುತ್ತದೆ ಎಂಬ ದೃಢನಂಬಿಕೆ ವಿದ್ರೋಹಿ ಶಕ್ತಿಗಳು ವಿದ್ವಂಸಕ   ಕೃತ್ಯಗಳನ್ನು ನಡೆಸಲು ಪ್ರಚೋದನೆಯಾಗುತ್ತಿದೆ,
ಜನರ ಧಾರ್ಮಿಕ ಶ್ರದ್ಧೆಯನ್ನು ಘಾಸಿಗೊಳಿಸಲು ಶಾಂತಿಯುತ ಗಣಪತಿ ವಿಸರ್ಜನೆಯ ಸಂದರ್ಭದಲ್ಲಿ ನಡೆದಿರುವ ಈ ಘಟನೆ ಹಿಂದೂ ಸಮುದಾಯವನ್ನು ಪ್ರಚೋದಿಸುವ ಕುಕೃತ್ಯವಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಸೌಹಾರ್ದತೆಯ ಸಮಾಜದಲ್ಲಿ ದಳ್ಳುರಿ ಹಚ್ಚಲು ಯತ್ನಿಸುತ್ತಿರುವ, ಹಿಂದೂ ಸಮುದಾಯದ ಆಚಾರ ವಿಚಾರಗಳನ್ನು ದಮನ ಮಾಡುವ ರೀತಿಯಲ್ಲಿ ವರ್ತಿಸಿರುವ ಹಾಗೂ ಭಾರತೀಯ ಪರಂಪರೆಯನ್ನು ಸದಾ ಕಾಲಕ್ಕೂ ಅಪಮಾನಿಸಲು ಯತ್ನಿಸುತ್ತಿರುವ ಉಗ್ರ ಮನಸ್ಥಿತಿಯ ವಿದ್ರೋಹಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿ ಎಂದು ಒತ್ತಾಯಿಸಿದ್ದಾರೆ.

ನಾಗಮಂಗಲ ಘಟನೆಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿ ಹಿಂದೂ ವಿರೋಧಿ ಚಟುವಟಿಕೆಗಳನ್ನು ಸಂಘಟಿಸುತ್ತಿರುವ ದುಷ್ಟ ಶಕ್ತಿಗಳನ್ನು ನಿಗ್ರಹಿಸದೇ ಹೋದರೆ
ಮುಂದಾಗುವ ಪರಿಣಾಮಗಳ ಹೊಣೆ ಕಾಂಗ್ರೆಸ್ ಸರ್ಕಾರವೇ ಹೊರಬೇಕಾಗುತ್ತದೆ.
ಕಾಂಗ್ರೆಸ್ ನ ಮತಬ್ಯಾಂಕ್ ಆಧಾರಿತ ಪಕ್ಷಪಾತ ನಡೆ ಕರುನಾಡನ್ನು ದಹಿಸುತ್ತಿದೆ ಎಂದು ಅವರು ಸಿಟ್ಟೆದ್ದಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!