Saturday, October 12, 2024

ವಂಡ್ಸೆ ಸ.ಮಾ.ಹಿ.ಪ್ರಾ ಶಾಲೆಯಲ್ಲಿ ರಾಜ್ಯದಲ್ಲೇ ವಿನೂತನ ಪ್ರಯೋಗ: ವಿದ್ಯಾರ್ಥಿಗಳ ಇ-ಪತ್ರಿಕೆ ‘ಬೆಳಕು’ ಅನಾವರಣ

ಕುಂದಾಪುರ: ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಸಾಹಿತ್ಯ ಚಟುವಟಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರೂಪಿಸಲಾದ ವಿದ್ಯಾರ್ಥಿಗಳ ಸಾಹಿತ್ಯಿಕ ಡಿಜಿಟಲ್ ಪತ್ರಿಕೆಬೆಳಕು’ ಸೆ.11ರಂದು ಬಿಡುಗಡೆಗೊಳಿಸಲಾಯಿತು.
ಮೂಕಾಂಬಿಕಾ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು ಇ-ಪತ್ರಿಕೆ ‘ಬೆಳಕು’ ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶಾಲಾ ಎಸ್‌ಡಿ‌ಎಂಸಿ ಅಧ್ಯಕ್ಷೆ ಡಾ. ಪೂರ್ಣಿಮಾ ಶೆಟ್ಟಿ, ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ ಅಡಿಕೆಕೊಡ್ಲು, ಶ್ರೀ ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಕೋಶಾಧಿಕಾರಿ ಗಿಳಿಯಾರು ಶ್ರೀಧರ್ ಶೆಟ್ಟಿ, ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್‌ನ ಟ್ರಸ್ಟಿ ಅನಂದ ಶೆಟ್ಟಿ ಸಬ್ಲಾಡಿ, ವಂಡ್ಸೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೀತಾ ಅವಿನಾಶ್, ಉಪಾಧ್ಯಕ್ಷ ಗೋವರ್ಧನ್ ಜೋಗಿ, ಗ್ರಾಮ ಪಂಚಾಯಿತಿ ಸದಸ್ಯೆ ಶಶಿಕಲಾ ಎಸ್ ವಂಡ್ಸೆ, ಶಿಕ್ಷಣ ಸಂಯೋಜಕರಾದ ಸತ್ಯನಾ ಕೊಡೇರಿ, ಗ್ರಾ.ಪಂ ಸದಸ್ಯ, ಗ್ರಾ.ಪಂ. ಮಾಜಿ ಸದಸ್ಯ ಗುಂಡು ಪೂಜಾರಿ ಹರವರಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂದೇಶ ಶೆಟ್ಟಿ, ಇಡೂರು ಕುಂಜ್ಞಾಡಿ ಗ್ರಾ.ಪಂ.ಅಧ್ಯಕ್ಷೆ ಆಶಾ ಆಚಾರ್ಯ, ಚಿತ್ತೂರು ಗ್ರಾ.ಪಂ ಅಧ್ಯಕ್ಷ ರವೀಂದ್ರ ಶೆಟ್ಟಿ, ವಂಡ್ಸೆ ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಎಂ ನಾಗರಾಜ್ ಶೆಟ್ಟಿ, ಶಾಲೆಯ ಮುಖ್ಯ ಶಿಕ್ಷಕ ಸದಾಶಿವ ಕೆಂಚನೂರು, ಶಿಕ್ಷಕವೃಂದದವರು ಉಪಸ್ಥಿತರಿದ್ದರು.
ಇದು ರಾಜ್ಯ ಮಟ್ಟದಲ್ಲಿ ಪ್ರಾಥಮಿಕ ಶಾಲೆಗಳ ಇತಿಹಾಸದಲ್ಲಿ ಒಂದು ವಿನೂತನ ಪ್ರಯತ್ನವಾಗಿದೆ. ವಿದ್ಯಾರ್ಥಿಗಳಲ್ಲಿ ಸಾಹಿತ್ಯಿಕ ಆಸಕ್ತಿ ಬೆಳೆಸುವ, ಓದುವ ಹವ್ಯಾಸ ಮೂಡಿಸುವ ನಿಟ್ಟಿನಲ್ಲಿ ಡಿಜಿಟಲ್ ಮಾಧ್ಯಮದಲ್ಲಿ ಇ-ಪತ್ರಿಕೆ ಆರಂಭ ಮಾಡಲಾಗಿದೆ. ವಿದ್ಯಾರ್ಥಿಗಳು ಬರೆದ ಕನ್ನಡ, ಇಂಗ್ಲಿಷ್ ಸಾಹಿತ್ಯಗಳನ್ನು, ಚಿತ್ರಗಳನ್ನು ಪ್ರಕಟಿಸಲಾಗುತ್ತದೆ. ಡಿಜಿಟಲ್ ಮಾದ್ಯಮದಲ್ಲಿ ಇರುವುದರಿಂದ ಲಿಂಕ್ ತೆರೆದು ಸಾಹಿತ್ಯಾಭಿಮಾನಿಗಳು ಓದಬಹುದಾಗಿದೆ.
ವಂಡ್ಸೆ ಶಾಲೆ ನಿರಂತರ ಶೈಕ್ಷಣಿಕ, ಪಾಠೇತರವಾಗಿ ಹೊಸ ಹೊಸ ಪ್ರಯೋಗಗಳನ್ನು ಮಾಡುತ್ತಾ ರಾಜ್ಯದ ಗಮನ ಸಳೆಯುತ್ತಿದೆ. ಈಗ ರಾಜ್ಯದಲ್ಲಿ ವಿಶೇಷವಾದ ಚಿಂತನೆಯ ಮೂಲಕ ಇ-ಮ್ಯಾಗಜಿನ್ ಆರಂಭಿಸಿದೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!