Saturday, October 12, 2024

ಸೆ. 28ರಂದು ನಡೆಸಬೇಕಿದ್ದ 402 ಪಿಎಸ್ಐ ಹುದ್ದೆಗಳ ಪರೀಕ್ಷೆ ಮುಂದೂಡಿಕೆ : ಗೃಹ ಸಚಿವ ಜಿ. ಪರಮೇಶ್ವರ್‌

ಜನಪ್ರತಿನಿಧಿ (ಬೆಂಗಳೂರು) : ಸೆಪ್ಟೆಂಬರ್ 28ರಂದು ನಡೆಸಬೇಕಿದ್ದ 402 ಪಿಎಸ್ಐ ಹುದ್ದೆಗಳ ಪರೀಕ್ಷೆಯನ್ನು ಪ್ರತಿಭಟನೆ ಮತ್ತು ಬೇಡಿಕೆಗಳಿಗೆ ಮಣಿದ ಸರ್ಕಾರ ಕೊನೆಗೂ ಮುಂದೂಡಿದೆ. ಈ ಮೂಲಕ ಯುಪಿಎಸ್ಸಿ ಮುಖ್ಯ ಪರೀಕ್ಷೆ ಅಭ್ಯರ್ಥಿಗಳು ನಿಟ್ಟುಸಿರು ಬಿಡುವಂತಾಗಿದೆ.

ಈ ಬಗ್ಗೆ ಅಧಿಕೃತ ಎಕ್ಸ್‌ ಖಾತೆಯ ಮೂಲಕ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಾಹಿತಿ ನೀಡಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 402 ಪಿಎಸ್ಐ ಹುದ್ದೆಗಳಿಗೆ ಸೆ.22ರಂದು ನಡೆಸಲು ಉದ್ದೇಶಿಸಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ನಾನು ಬೆಳಿಗ್ಗೆ ಮಾತನಾಡುವಾಗ ಸೆ.28ರಂದು ಪರೀಕ್ಷೆ ನಡೆಸುವುದಾಗಿ ಹೇಳಲಾಗಿತ್ತು. ಆದರೆ, ಆ ದಿನವೂ ಯುಪಿಎಸ್‌ಸಿ ಪರೀಕ್ಷೆ ಇರುವ ಕಾರಣ ಮತ್ತೊಂದು ದಿನಾಂಕದಂದು ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ವರದಿಗಾರರಿಗೆ ಸ್ಪಂದಿಸಿದ ಗೃಹ ಸಚಿವರು, ರಾಜ್ಯದ ನೂರಕ್ಕೂ ಹೆಚ್ಚು ಆಕಾಂಕ್ಷಿಗಳು ಯುಪಿಎಸ್‌ಸಿ ಪ್ರಿಲಿಮ್ಸ್ ಪರೀಕ್ಷೆ ಬರೆದು, ಮುಖ್ಯ ಪರೀಕ್ಷೆಗೆ ಅರ್ಹತೆ ಹೊಂದಿದ್ದಾರೆ. ಯುಪಿಎಸ್​ಸಿ ಮುಖ್ಯ ಪರೀಕ್ಷೆ ಮತ್ತು ಪಿಎಸ್‌ಐ ಪರೀಕ್ಷೆ ಸೆ.22ರಂದು ನಿಗದಿಯಾಗಿರುವುದರಿಂದ ಎರಡು ಪರೀಕ್ಷೆ ಬರೆಯಲು ಆಗುವುದಿಲ್ಲ. ಯಾವುದಾದರು ಒಂದು ಪರೀಕ್ಷೆ ಅವಕಾಶ ಕೈತಪ್ಪುತ್ತದೆ. ಹೀಗಾಗಿ ಪಿಎಸ್ಐ ಪರೀಕ್ಷೆ ಮುಂದೂಡುವಂತೆ ಆಕಾಂಕ್ಷಿಗಳು ಮನವಿ ಸಲ್ಲಿಸಿದ್ದರು. ಬಿಜೆಪಿಯ ನಿಯೋಗವು ಮನವಿ ನೀಡಿತ್ತು. ಸೆ.28ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದರು.

ಮಂಗಳವಾರವಷ್ಟೇ ಯುಪಿಎಸ್ಸಿ ಮುಖ್ಯ ಪರೀಕ್ಷೆ ಹಾಗೂ ಪಿಎಸ್‌ಐ ನೇಮಕಾತಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳ ನಿಯೋಗ ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಅವರನ್ನು ಭೇಟಿಯಾಗಿ ಪರೀಕ್ಷೆ ಮುಂದೂಡಿಕೆಗೆ ಮನವಿ ಮಾಡಿತ್ತು. ಆಗ ಸಚಿವರು ಕೆಇಎ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದರು.

https://x.com/DrParameshwara/status/1834254078727086551

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!