Sunday, October 13, 2024

ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮ: ಹೆಮ್ಮಾಡಿಯಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ, ಮಾಹಿತಿ ಕಾರ್ಯಕ್ರಮ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ) ಕುಂದಾಪುರ ತಾಲೂಕು, ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ, ತಲ್ಲೂರು ವಲಯದ ಹೆಮ್ಮಾಡಿ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ, ಹಾಗೂ ಮಾಹಿತಿ ಕಾರ್ಯಕ್ರಮವನ್ನು ಒಕ್ಕೂಟದ ಅಧ್ಯಕ್ಷರಾದ ಈಶ್ವರ್ ಹಾಗೂ ಅತಿಥಿಗಳು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಸಂಪನ್ಮೂಲ ವ್ಯಕ್ತಿಯಾದ ತಾಲೂಕು ಆಯುಷ್ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿ ಡಾ.ಶಿಲ್ಪ ಅವರು ಪೌಷ್ಟಿಕ ಆಹಾರದಿಂದ ಆರೋಗ್ಯವನ್ನು ಯಾವ ರೀತಿ ಕಾಪಾಡಿಕೊಳ್ಳಬೇಕು, ಹಿಂದಿನ ಆಹಾರ ಪದ್ಧತಿಗೂ ಈಗಿನ ಆಹಾರ ಪದ್ಧತಿಗೂ ಇರುವ ವ್ಯತ್ಯಾಸವನ್ನು ತಿಳಿಸಿ, ಸಿರಿಧಾನ್ಯಗಳನ್ನು ಬಳಕೆ ಮಾಡಿ ಆಹಾರ ಪದಾರ್ಥವನ್ನು ತಯಾರಿಸಬೇಕು ಹಾಗೆ ಯಥೇಚ್ಛವಾಗಿ ಸೊಪ್ಪು ತರಕಾರಿಗಳನ್ನು ಆಹಾರದಲ್ಲಿ ಬಳಕೆ ಮಾಡುವುದರಿಂದ ಸಕ್ಕರೆ ಕಾಯಿಲೆ ಮತ್ತು ಬಿ.ಪಿ (ರಕ್ತದ ಒತ್ತಡ) ವನ್ನು ಕಡಿಮೆ ಮಾಡಬಹುದು ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರಾದ ಈಶ್ವರ್, ಎಸ್ ಡಿ ಎಂ ಸಿಯ ಅಧ್ಯಕ್ಷರಾದ ಭಾಗೀರಥಿ , ಜ್ಞಾನವಿಕಾಸ ಸಮನ್ವಯಾಧಿಕಾರಿ ರೇಣುಕಾ, ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ರೇಖಾ, ಕೇಂದ್ರದ ಸದಸ್ಯರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಸಾಂಪ್ರದಾಯದ ಅಡುಗೆಗಳ ಪ್ರಾತ್ಯಕ್ಷಿಕೆ ಜೊತೆಗೆ ಪ್ರದರ್ಶನ ಮಾಡಲಾಯಿತು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!