Saturday, October 12, 2024

ರೇಣುಕಾಸ್ವಾಮಿ ಕೊ* ಪ್ರಕರಣ : ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಾಪಾಸ್‌ ಪಡೆದ ಪವಿತ್ರಾ ಗೌಡ

ಜನಪ್ರತಿನಿಧಿ (ಬೆಂಗಳೂರು) : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪವಿತ್ರಾ ಗೌಡ, ಜೀಂನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಾಪಾಸ್‌ ಪಡೆದಿದ್ದಾರೆ. ಈ ಸಂಬಂಧಿಸಿದಂತೆ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಸ್.‌ ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ನಿನ್ನೆ (ಶುಕ್ರವಾರ) ವಿಚಾರಣೆ ಮಾಡಿತ್ತು.

ವಿಚಾರಣೆಯ ಸಂದರ್ಭದಲ್ಲಿ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್‌ ಪಿ. ಪ್ರಸನ್ನ ಕುಮಾರ್‌, ʼ ಈಗಾಗಲೇ ವಿಚಾರಣಾ ನ್ಯಾಯಾಲಯಕ್ಕೆ ನಾಲ್ಕು ಸಾವಿರ ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಅದರಲ್ಲಿರುವ ಅಂಶಗಳನ್ನು ಪರಿಶೀಲಿಸಿ ವಿಚಾರಣಾ ನ್ಯಾಯಾಲಯ ಮುಂದಿನ ಕ್ರಮ ವಹಿಸಲಿದೆ. ಹಾಗಾದ್ದದಿಂದ, ಪವಿತ್ರಾ ಗೌಡ ವಿಚಾರಣಾ ನ್ಯಾಯಾಲಯದಲ್ಲೇ ಜಾಮೀನು ಅರ್ಜಿ ಸಲ್ಲಿಸಬಹುದಾಗಿದೆ. ದೋಷಾರೋಪ ಪಟ್ಟಿ ಸಲ್ಲಿಕೆಯಾಗಿರುವ ಕಾರಣ ಪ್ರಕರಣದ ಏಳನೇ ಆರೋಪಿ ಅನುಕುಮಾರ್‌ ಸಹ ಹೈಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ಹಿಂಪಡೆದಿದ್ದಾರೆ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದಾರೆ.

ಈ ಸಂಬಂಧಿಸಿದಂತೆ ನ್ಯಾಯಮೂರ್ತಿಗಳು, ಆರೋಪಿ ಪವಿತ್ರಾ ಗೌಡ ಪರ ವಕೀಲ ಟಾಮಿ ಸೆಬಾಸ್ಟಿಯನ್ ಅವರನ್ನು ಉದ್ದೇಶಿಸಿ, ದೋಷಾರೋಪ ಪಟ್ಟಿ ಸಲ್ಲಿಕೆಯಾಗಿರುವ ಕಾರಣ ಸೆಷನ್ಸ ನ್ಯಾಯಾಲಯದಲ್ಲೇ ಜಾಮೀನು ಅರ್ಜಿ ಸಲ್ಲಿಸಬಹುದು. ಹಾಗಾಗಿ, ನೀವು ಈ ಅರ್ಜಿ ಮುಂದುವರಿಸುತ್ತೀರಾ ಅಥವಾ ಹಿಂಪಡೆಯುತ್ತೀರಾ ಎಂದು ಕೇಳಿದರು, ಪ್ರತಿಯಾಗಿ ಟಾಮಿ ಸೆಬಾಸ್ಟಿಯನ್‌ ಅರ್ಜಿ ಹಿಂಪಡೆಯುವುದಾಗಿ ತಿಳಿಸಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಗರದ ೫೭ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಲಯದ ನ್ಯಾಯಾಧೀಶ ಜೈಶಂಕರ್‌ ೨೦೨೪ ಆಗಸ್ಟ್‌ ೩೧ ರಂದು ವಜಾಗೊಳಿಸಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!