spot_img
Friday, April 25, 2025
spot_img

ವಾಲ್ಮೀಕಿ ನಿಗಮ ಹಗರಣ : ಗಂಗಾ ಕಲ್ಯಾಣ ಯೋಜನೆಯ ಹಣ ದುರ್ಬಳಕೆ !? : ಸಿದ್ದರಾಮಯ್ಯನವರೇ ನೈತಿಕತೆಯಿದ್ದರೇ ರಾಜೀನಾಮೆ ಕೊಟ್ಟು ಹೊರಡಿ : ಬಿಜೆಪಿ

ಜನಪ್ರತಿನಿಧಿ (ಬೆಂಗಳೂರು) : ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ರಹ್ಮಾಂಡ ಭ್ರಷ್ಟಾಚಾರ ಬಗೆದಷ್ಟು ಬಯಲಾಗುತ್ತಿದೆ. ಪರಿಶಿಷ್ಟರ ಕಲ್ಯಾಣದ ನೆಪದಲ್ಲಿ ಕಾಂಗ್ರೆಸ್ ಸರ್ಕಾರ, ಗಂಗಾ ಕಲ್ಯಾಣ ಯೋಜನೆಯ ಹಣವನ್ನು ಲಪಟಾಯಿಸಿರುವುದು ಇ.ಡಿ. ದೋಷಾರೋಪ ಪಟ್ಟಿಯಲ್ಲಿ ಬಯಲಾಗಿದೆ ಎಂದು ಬಿಜೆಪಿ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದೆ.

ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಕಾಂಗ್ರೆಸ್‌ ವಿರುದ್ಧ ವಾಲ್ಮಿಕ ಹಗರಣಕ್ಕೆ ಸಂಬಂಧಿಸಿದಂತೆ ಟೀಕಿಸಿದ ಬಿಜೆಪಿ, ಹಗರಣಕ್ಕೆ ಗಂಗಾ ಕಲ್ಯಾಣದ ಹಣ ದುರ್ಬಳಕೆ ಮಾಡಿಕೊಂಡಿರುವುದು ಹಾಗೂ ಲೂಟಿ ಹೊಡೆಯುವ ಉದ್ದೇಶದಿಂದ ಅನಧಿಕೃತ ಬ್ಯಾಂಕ್‌ ಖಾತೆ ತೆರೆದಿರುವುದರ ಬಗ್ಗೆ ಆಗಿರುವ ಪತ್ರಿಕೆಯೊಂದರ ವರದಿಯನ್ನು ಉಲ್ಲೇಖಿಸಿ ಬಿಜೆಪಿ ಟಿಕಿಸಿದೆ.

2023-24ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯ ಫಲಾನುಭವಿಗಳಿಗೆ ಮಂಜೂರಾಗಿದ್ದ 44 ಕೋಟಿ ರೂ ಅನುದಾನವೂ ಫಲಾನುಭವಿಗಳಿಗೆ ತಲುಪಿಲ್ಲ. ಸಮಾಜವಾದಿ ಹಿನ್ನೆಲೆಯ ಹಣೆ ಪಟ್ಟಿ ಕಟ್ಟಿಕೊಂಡಿರುವ ಸಿಎಂ ಸಿದ್ದರಾಮಯ್ಯ ನವರೇ, ಯಾವ ಮುಖವಿಟ್ಟುಕೊಂಡು ಸಿಎಂ ಸ್ಥಾನದಲ್ಲಿ ಮುಂದುವರಿಯುತ್ತೀರಿ, ಕಿಂಚಿತ್ತಾದರೂ ನೈತಿಕತೆಯಿದ್ದರೇ ಮೊದಲು ರಾಜೀನಾಮೆ ಕೊಟ್ಟು ಹೊರಡಿ ಎಂದು ಒತ್ತಾಯಿಸಿದೆ.

Related Articles

Stay Connected

21,961FansLike
3,912FollowersFollow
22,300SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!