Sunday, October 13, 2024

ಯಕ್ಷಗುರು ಸಂಜೀವ ಸುವರ್ಣರಿಗೆ ಪ್ರತಿಷ್ಠಿತ ʼಪಾರ್ತಿಸುಬ್ಬ ಪ್ರಶಸ್ತಿʼ.

ಜನಪ್ರತಿನಿಧಿ (ಉಡುಪಿ) : ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣರನ್ನು 2023ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡಮಿಯ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ನವೆಂಬರ್ ತಿಂಗಳಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪದಾನ ಮಾಡಲಾಗುವುದು. ಪ್ರಶಸ್ತಿಯು ಒಂದು ಲಕ್ಷ ರೂ ನಗದು, ಪ್ರಶಸ್ತಿ ಫಲಕಗಳನ್ನು ಹೊಂದಿರುತ್ತದೆ ಎಂದು ತಿಳಿಸಿದರು.

ಇದರೊಂದಿಗೆ ಅಕಾಡಮಿಯ ನೂತನ ಅಧ್ಯಕ್ಷರು ಅಕಾಡಮಿಯ ವಿವಿಧ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದರು. ಐವರು ಗಣ್ಯರನ್ನು ವಾರ್ಷಿಕ ಗೌರವ ಪ್ರಶಸ್ತಿಗೆ, 10 ಮಂದಿ ಯಕ್ಷಗಾನ ಕಲಾವಿದರನ್ನು ಯಕ್ಷಸಿರಿ ವಾರ್ಷಿಕ ಪ್ರಶಸ್ತಿ‌ಗೆ ಆಯ್ಕೆ ಮಾಡಲಾಗಿದೆ‌. ಅಲ್ಲದೇ 2022 ಮತ್ತು 2023ನೇ ಸಾಲಿನ ಪುಸ್ತಕ ಪ್ರಶಸ್ತಿಗೆ ಪುಸ್ತಕಗಳನ್ನು ಸಹ ಆಯ್ಕೆ ಮಾಡಲಾಗಿದೆ ಎಂದೂ ತಿಳಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!