spot_img
Tuesday, March 31, 2026
spot_img

ಕೆರಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

ಕುಂದಾಪುರ, ಸೆ.14: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂಜುಬಂಟ್ರಾಡಿಯಲ್ಲಿ ಕೆರಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿ 2024-25 ನೆರವೇರಿತು.

ಕಾರ್ಯಕ್ರಮವನ್ನು ಸೌಕೂರು ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು, ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಎನ್.ಮಂಜಯ್ಯ ಶೆಟ್ಟಿ ಸಬ್ಲಾಡಿ ಉದ್ಘಾಟಿಸಿದರು.

ಸಭಾಧ್ಯಕ್ಷತೆಯನ್ನು ಕೆರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುದರ್ಶನ್ ಶೆಟ್ಟಿ ವಹಿಸಿದ್ದರು. ಎಸ್ ಡಿ ಎಂ ಸಿ ಅಧ್ಯಕ್ಷರಾದ ಭಾಸ್ಕರ ಮೊಗವೀರ, ಸ್ಥಳೀಯ ಪಂಚಾಯತ್ ಸದಸ್ಯರಾದ ನಾರಾಯಣ ಶೆಟ್ಟಿ ಸಬ್ಲಾಡಿ ಹಾಗೂ ಲಕ್ಷ್ಮಿ, ನಿವೃತ್ತ ಮುಖ್ಯ ಶಿಕ್ಷಕರಾದ ಮಂಜಯ್ಯ ಶೆಟ್ಟಿ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ರವೀಂದ್ರ ಶೆಟ್ಟಿ ಕೂಡಾಲು, ಮಾಜಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶೇಖರ್ ಶೆಟ್ಟಿ, ಕೂಡಾಲು, ಟೀಚರ್ಸ್ ಕೋ ಅಪರೇಟಿವ್ ಬ್ಯಾಂಕ್ ಉಡುಪಿ ಇದರ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ಕೊಲ್ಲೂರು ಕ್ಲಸ್ಟರ್ ನ ಸಿ ಆರ್ ಪಿ ಶೈಲಜಾ ಹಾಗೂ ಕರ್ಕುಂಜೆ ಕ್ಲಸ್ಟರ್ ನ ಸಿ.ಆರ್.ಪಿ ರವಿಚಂದ್ರ ಮತ್ತು ಪ್ರತಿಭಾ ಕಾರಂಜಿಯ ನೋಡಲ್ ಅಧಿಕಾರಿಗಳಾದ ಹಾಗೂ ವಂಡ್ಸೆ ವೃತ್ತದ ಶಿಕ್ಷಣ ಸಂಯೋಜಕರು ಆದ ಸತ್ಯನಾ ಕೊಡೇರಿ ಉಪಸ್ಥಿತರಿದ್ದರು.

ವಂಡ್ಸೆ ವಲಯದ ಶಿಕ್ಷಣ ಸಂಯೋಜಕರಾಗಿರುವ ಸತ್ಯನಾ ಕೊಡೇರಿ ಪ್ರಾಸ್ತವಿಕ ಮಾತುಗಳನ್ನಾಡಿದರು ಕೆರಾಡಿ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿಗಳಾದ ಎಂ ನಾಗರಾಜ್ ಸ್ವಾಗತಿಸಿದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆಗೈದರು. ಶಾಲಾ ಮುಖ್ಯ ಶಿಕ್ಷಕರಾದ ಕೃಷ್ಣಪ್ಪ ಆರ್ ಹಾಗೂ ಸಹ ಶಿಕ್ಷಕರಾದ ಜಯರಾಮ್ ಕೊಠಾರಿ ವಂದಿಸಿದರು. ಹಾಗೂ ಶಾಲೆಯ ಎಲ್ಲ ಶಿಕ್ಷಕರು ಸಹಕರಿಸಿದರು. ಕ್ಲಸ್ಟರ್ ವ್ಯಾಪ್ತಿಯ ಎಲ್ಲಾ ಶಾಲಾ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!