Saturday, October 12, 2024

ಲಂಚ ಬೇಡಿಕೆ, ಬೆದರಿಕೆ ಆರೋಪ : ಬಿಜೆಪಿ ಶಾಸಕ ಮುನಿರತ್ನ ಪೊಲೀಸ್‌ ವಶ | ಬಿಜೆಪಿ ಶಿಸ್ತು ಸಮಿತಿಯಿಂದ ಮುನಿರತ್ನಗೆ ನೋಟೀಸ್‌

ಜನಪ್ರತಿನಿಧಿ (ಬೆಂಗಳೂರು) : ಲಂಚ ಹಾಗೂ ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪದ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೋಲಾರ ಜಿಲ್ಲೆ ಮುಳುಬಾಗಲು ತಾಲೂಕಿನ ನಂಗಲಿ ಎನ್ನುವಲ್ಲಿ ವೈಯಾಲಿಕಾವಲ್‌ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕರ್ನಾಟಕ ಆಂಧ್ರಪ್ರದೇಶದ ಗಡಿಯಲ್ಲಿ ಶಾಸಕರನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿಗೆ ಕರೆ ತರಲಾಗಿತ್ತಿದೆ. ಮುನಿರತ್ನ ಅವರು ಆಂಧರಪ್ರದೇಶಕ್ಕೆ ಹೋಗುತ್ತಿದ್ದ ಮಾಹಿತಿ ದೊರಕಿತ್ತು. ಮೊಬೈಲ್‌ ಲೊಕೇಶನ್‌ ಆಧರಿಸಿ ಅವರಿದ್ದ ಸ್ಥಳವನ್ನು ಪತ್ತೆ ಮಾಡಲಾಯಿತು ಎಂದು ಪೊಲೀಸರು ತಿಳಿದಿದ್ದಾರೆ.

ಘನತ್ಯಾಜ್ಯ ವಿಲೇವಾರಿಗೆ ಗುತ್ತಿಗೆಗೆ ಸಂಬಂಧಿಸಿದಂತೆ ಮೂವತ್ತು ಲಕ್ಷ ರೂ. ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದಾರೆಂದು ಆರೋಪಿಸಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಚೆಲುವರಾಉ ಎನ್ನುವವರು ದೂರು ನೀಡಿದ್ದರು. ವೈಯ್ಯಾಲಿಕಾವಲ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ಜಾತಿ ನಿಂದನೆ ಆರೋಪದ ಅಡಿ ಇದೇ ಠಾಣೆಯಲ್ಲಿ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್‌ ದಾಖಲಾಗಿತ್ತು. ಈ ಎರಡು ಪ್ರಕರಣದಲ್ಲಿ ಶಾಸಕರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಮುನಿರತ್ನಗೆ ಬಿಜೆಪಿಯಿಂದ ನೋಟೀಸ್‌
ಲಂಚ ಹಾಗೂ ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪದ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೋಲಾರ ಜಿಲ್ಲೆ ಮುಳುಬಾಗಲು ತಾಲೂಕಿನ ನಂಗಲಿ ಎನ್ನುವಲ್ಲಿ ವೈಯಾಲಿಕಾವಲ್‌ ಪೊಲೀಶರು ವಶಕ್ಕೆ ಪಡೆದುಕೊಂಡಿರುವ ಬೆನ್ನಲ್ಲೇ ಬಿಜೆಪಿಯಿಂದ ಮುನಿರತ್ನ ಅವರಿಗೆ ನೋಟೀಸ್‌ ಜಾರಿಯಾಗಿದೆ.

ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ ಅವರು ಮುನಿರತ್ನ ವಿರುದ್ಧ ಕೇಳಿ ಬಂದಿರುವ ಆರೋಪದ ಕುರಿತಾಗಿ ಮುನಿರತ್ನ ಅವರಿಂದ ನೋಟೀಸ್‌ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!