Sunday, October 13, 2024

ಕುಂದಾಪುರದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-ಮಾನವ ಸರಪಳಿ

  

 

ಕುಂದಾಪುರ, ಸೆ.15: ವಿಶ್ವದಲ್ಲಿಯೇ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶ ಭಾರತ. ಸರ್ವಧರ್ಮಗಳು ಜಾತಿ ಮತ ಪಂಥಗಳನ್ನು ಸಾಮರಸ್ಯದಿಂದ ಕೊಂಡೊಯ್ಯುತ್ತಿರುವ ಭಾರತ ಪ್ರಜಾತಾಂತ್ರಿಕ ವ್ಯವಸ್ಥೆಯಲ್ಲಿ ಇನ್ನೂ ಗಟ್ಟಿಯಾಗಬೇಕು ಎಂದು ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಕುಂದಾಪುರದ ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ಭಾನುವಾರ ಬೆಳಿಗ್ಗೆ ನಡೆದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಆಯೋಜಿಸಿಸದ ಮಾನವ ಸರಪಳಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಮಾತನಾಡಿ ಡಾ.ಬಿ.ಆರ್ ಅಂಬೇಡ್ಕರ್ ಸಂವಿಧಾನದ ಜೊತೆಗೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಎತ್ತಿ ಹಿಡಿದು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿಯನ್ನು ನಮ್ಮೆಲ್ಲರಿಗೆ ಕೊಟ್ಟು ಹೋಗಿದ್ದಾರೆ. ಅದನ್ನು ಸಮರ್ಥವಾಗಿ ಮುನ್ನಡೆಸಿಕೊಂಡು ಹೋಗಬೇಕಾದ ಗುರುತರವಾದ ಜವಬ್ದಾರಿ ನಮ್ಮ ಮೇಲಿದೆ ಎಂದರು.

ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮಿ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ಬಿಸಿ‌ಎಂ ಹಾಸ್ಟೆಲಿನ ವಿದ್ಯಾರ್ಥಿನಿಯರು ಸಮೂಹ ನೃತ್ಯ ಪ್ರಸ್ತುತ ಪಡಿಸಿದರು.. ಸಭಾ ಕಾರ್ಯಕ್ರಮದಲ್ಲಿ ಕುಂದಾಪುರ ಉಪ ವಿಭಾಗಾಧಿಕಾರಿ ಮಹೇಶ್ಚಂದ್ರ, ಪುರಸಭೆಯ ಅಧ್ಯಕ್ಷ ಮೋಹನದಾಸ ಶೆಣೈ, ಪುರಸಭೆ ಮುಖ್ಯ ಅಧಿಕಾರಿ ಆನಂದಪ್ಪ ಹಾಗೂ ಹಿರಿಯರು ಭಾಗವಹಿಸಿದ್ದರು.

ಬಳಿಕ ಅರಣ್ಯ ಇಲಾಖೆಯ ವತಿಯಿಂದ ಹೆದ್ದಾರಿ ಬದಿಯಲ್ಲಿ ಅಮೂಲ್ಯ ಗಿಡಗಳನ್ನು ನೆಡಲಾಯಿತು. ವಿವಿಧ ಶಾಲಾ ಮಕ್ಕಳಿಂದ ಮತ್ತು ಸಾರ್ವಜನಿಕರಿಂದ ಹೆದ್ದಾರಿಯ ಪಕ್ಕದಲ್ಲಿ ಉದ್ದಕ್ಕೂ ಮಾನವ ಸರಪಳಿಯನ್ನು ನಿರ್ಮಿಸಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಗೌರವ ಸೂಚಿಸಲಾಯಿತು. ಪುರಸಭೆ ವತಿಯಿಂದ ಸಿಹಿ ತಿಂಡಿ ಹಂಚಲಾಯಿತು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!