Sunday, October 13, 2024

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಕುಂದಾಪುರ ತಾ.ಮಟ್ಟದ ಪದವಿ ಪೂರ್ವ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾಟ

ಕುಂದಾಪುರ : ಸೆಪ್ಟೆಂಬರ್ 14 ರಂದು ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಸಹಭಾಗಿತ್ವ ದಲ್ಲಿ ಕುಂದಾಪುರ ತಾಲೂಕು ಮಟ್ಟದ ಬಾಲಕ- ಬಾಲಕಿಯರ ವಾಲಿಬಾಲ್ ಪಂದ್ಯಾಟ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.
ದೀಪವನ್ನು ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ ಸರಕಾರಿ ಪ್ರೌಢಶಾಲೆ ಸಾಲೆತ್ತೂರು ಇಲ್ಲಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ರಾಘವೇಂದ್ರ ಕಂಡ್ಲೂರು ಮಾತನಾಡಿ, ಇಂದಿನ ಯುವ ಜನಾಂಗ ದುಶ್ಚಟಗಳಿಗೆ ದಾಸರಾಗದೇ, ಅತ್ಯುತ್ತಮ ಹವ್ಯಾಸವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ವಿದ್ಯೆಯೊಂದಿಗೆ ಕ್ರೀಡೆ ಸಹ ಮುಖ್ಯ ಎಂಬುದನ್ನು ಅರಿತು ಬದುಕಿನ ಯಶಸ್ಸಿನ ಮೆಟ್ಟಿಲುಗಳನ್ನು ಏರುತ್ತಾ ತಮ್ಮ ಕಾರ್ಯ ಸಾಧನೆಗಳ ಮೂಲಕ ಪ್ರಸಿದ್ದಿ, ಜನಪ್ರೀತಿಯನ್ನು ಪಡೆಯುವಂತಾಗಲಿ ಎಂದು ಆಶಿಸಿದರು.
ಶ್ರೀ ವೆಂಕಟರಮಣ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಸಮಾರಂಭದಲ್ಲಿ ಅತಿಥಿಗಳಾಗಿ ಉಡುಪಿ ಜಿಲ್ಲಾ ಪದವಿ ಪೂರ್ವ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಗೌರವಾಧ್ಯಕ್ಷರಾದ ಜೀವನ್ ಕುಮಾರ್ ಶೆಟ್ಟಿ, ಕುಂದಾಪುರ ದೈಹಿಕ ಶಿಕ್ಷಣ ಸಂಘದ ಸಂಯೋಜಕರಾದ ಶ್ರೀ ರಾಮ ಶೆಟ್ಟಿ,ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಶ್ರೀ ವೆಂಕಟರಮಣ ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ಪ್ರಮೀಳಾ ಡಿಸೋಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಬಾಲಕಿಯರ ವಿಭಾಗದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಶಂಕರನಾರಾಯಣ ಪ್ರಥಮ ಸ್ಥಾನವನ್ನು, ಭಂಡಾರ್ ಕಾರ್ಸ್ ಪದವಿ ಪೂರ್ವ ಕಾಲೇಜು ಕುಂದಾಪುರ ದ್ವಿತೀಯ ಸ್ಥಾನವನ್ನು ಪಡೆದರೆ, ಬಾಲಕರ ವಿಭಾಗದಲ್ಲಿ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಪ್ರಥಮ ಸ್ಥಾನಿಯಾದರೆ, ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.
ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ ಸ್ವಾಗತಿಸಿದರು , ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್ ವಂದಿಸಿದರು, ಕನ್ನಡ ಉಪನ್ಯಾಸಕಿ ಸುನೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಸಮಾರೋಪ ಸಮಾರಂಭದ ಕಾರ್ಯಕ್ರಮವನ್ನು ದೈಹಿಕ ಶಿಕ್ಷಣ ನಿರ್ದೇಶಕರಾದ ರಾಘವೇಂದ್ರ ಗಾಣಿಗ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!