Sunday, October 13, 2024

ಪ್ರಧಾನಿ ನರೇಂದ್ರ ಮೋದಿಯವರ 74ನೇ ಹುಟ್ಟುಹಬ್ಬದ ಪ್ರಯುಕ್ತ ಗೋವಿಗಾಗಿ ಮೇವು ವಿತರಣೆ

ಕುಂದಾಪುರ: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 74ನೇ ಹುಟ್ಟುಹಬ್ಬದ ಪ್ರಯುಕ್ತ ಅಸೋಡು ಗೋಶಾಲೆಯಲ್ಲಿ ಬಿಜೆಪಿ ಕುಂದಾಪುರ ಮಹಿಳಾ ಮೋರ್ಚಾದ ವತಿಯಿಂದ ಗೋವಿಗಾಗಿ ಮೇವು ಕಾರ್ಯಕ್ರಮ ಕುಂದಾಪುರ ಮಂಡಲದ ಮಹಿಳಾ ಮೋರ್ಚಾದ ಅಧ್ಯಕ್ಷೆ ಸೌರಭಿ ಪೈ ಅಧ್ಯಕ್ಷತೆಯಲ್ಲಿ ನೆರವೇರಿತು.

ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಗೋವುಗಳಿಗೆ ಮೇವು ತಿನ್ನಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿ, ಭಾರತಿಯರಾದ ನಮಗೆ ಸಮರ್ಥ ನಾಯಕ ಸಿಕ್ಕಿರುವುದು ನಮ್ಮ ಭಾಗ್ಯ. ಭಾರತೀಯ ಜನತಾ ಪಕ್ಷ ದೇಶದಲ್ಲಿ ಮಾಡುತ್ತಿರುವ ಇಂತಹ ಕಾರ್ಯಕ್ರಮದ ಪುಣ್ಯದ ಪ್ರಾಪ್ತಿ ನರೇಂದ್ರ ಮೋದಿಜಿ ಅವರಿಗೆ ಸಿಗಬೇಕು. ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರ ಪರವಾಗಿ ಇವತ್ತು ಒಂದು ಪುಣ್ಯಕ್ಷೇತ್ರದಲ್ಲಿ ಕಾರ್ಯಕ್ರಮವನ್ನು ಆಚರಣೆಯನ್ನು ಮಾಡಿದ್ದೇವೆ ಎಂದು ತಿಳಿಸಿದರು.

ಬಿಜೆಪಿ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಈ ಸಂದರ್ಭದಲ್ಲಿ ಕುಂದಾಪುರ ಮಂಡಲ ನಿಕಟ ಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆ, ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ ಎಸ್, ಕುಂದಾಪುರ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾದ ಶ್ವೇತಾ ಶ್ರೀನಿಧಿ ಉಪಾಧ್ಯಾಯ, ವಿದ್ಯಾ ಸಾಲಿಯಾನ್, ಮಂಗಳೂರು ಸಹ ಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಮಂಡಲ ಉಪಾಧ್ಯಕ್ಷರಾದ ಸುನಿಲ್ ಶೆಟ್ಟಿ ಹೇರಿಕುದ್ರು, ರೂಪಾ ಬಾಬು ಪೈ, ಮಂಡಲ ಕಾರ್ಯದರ್ಶಿ ನೇತ್ರಾವತಿ ಮಡಿವಾಳ, ಮಹಿಳಾ ಮೋರ್ಚದ ಉಪಾಧ್ಯಕ್ಷೆ ರೋಹಿಣಿ ಪೈ, ಸ್ಮಿತಾ ಕೃಷ್ಣಮೂರ್ತಿ, ಕಾಳವಾರ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸುಖಾನಂದ ಹೆಗ್ಡೆ ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!