Saturday, October 12, 2024

ಉಡುಪಿ : ಜಿಲ್ಲೆಯಲ್ಲಿ ಒಟ್ಟು 11 ಕಾಲರ ಪ್ರಕರಣ ಪತ್ತೆ | ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿಗಳು ಮಾಹಿತಿ

ಜನಪ್ರತಿನಿಧಿ (ಉಡುಪಿ): ಉಡುಪಿ ಜಿಲ್ಲೆಯ ಕೆಲವು ಕಡೆಗಳಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ಈವರೆಗೆ ಜಿಲ್ಲೆಯಲ್ಲಿ ಒಟ್ಟು 11 ಕಾಲರ ಪ್ರಕರಣ ವರದಿಯಾಗಿದೆ. ಕಾಲಾರದ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು, ಸ್ವತ್ಛತೆಗೆ ಆದ್ಯತೆ ನೀಡುವ ಮೂಲಕ ಕಾಲರಾ ರೋಗದಿಂದ ದೂರವಿರಲು ಸಾಧ್ಯವೆಂದು ಜಿಲ್ಲಾಧಿಕಾರಿ ಡಾ| ಕೆ.ವಿದ್ಯಾಕುಮಾರಿ ಮಾಹಿತಿ ನೀಡಿದ್ದಾರೆ.

ಇಂದು(ಬುಧವಾರ) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆ ಮತ್ತು ಡೆಂಗ್ಯೂ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ಕಾರ್ಕಳದ ಈದು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 5 ಪ್ರಕರಣಗಳು ಕಂಡುಬಂದಿದ್ದು, ಮಲ್ಪೆ, ಶಿರ್ವ, ಕಾಪು, ಕೆಮ್ಮಣ್ಣು ವಾಂತಿ ಬೇಧಿ ಪ್ರಕರಣಗಳು ಕಂಡುಬಂದು ಕಾಲರಾ ರೋಗ ಎಂದು ವರದಿಯಲ್ಲಿ ತಿಳಿದು ಬಂದಿದೆ. ಸಾರ್ವಜನಿಕರು ಈ ಬಗ್ಗೆ ಮುಂಜಾಗೃತೆಯಿಂದಿರಬೇಕೆಂದು ಎಂದವರು ಸೂಚಿಸಿದ್ದಾರೆ.

ಇನ್ನು, ಹೋಟೆಲು, ರೇಸ್ಟಾರೆಂಟ್ ಗಳಲ್ಲಿ ಗ್ರಾಹಕರಿಗೆ ಕುಡಿಯಲು ಅಗತ್ಯವಾಗಿ ಬಿಸಿ ನೀರನ್ನು ನೀಡಬೇಕು. ಹೋಟೆಲ್‌, ರೆಸ್ಟಾರೆಂಟ್‌ ಗಳಲ್ಲಿ ಬಳಸುವ ಲೋಟ, ಪ್ಲೇಟ್ ಮತ್ತು ಇತರೆ ಪಾತ್ರೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕು. ಸಾರ್ವಜನಿಕರು ರಸ್ತೆ ಬದಿಯಲ್ಲಿ ಮಾರಾಟ ಮಾಡುವ ತಿನಿಸು, ತಳ್ಳು ಗಾಡಿಯಲ್ಲಿ ಮಾರಾಟ ಮಾಡುವ ಆಹಾರ ಹಾಗೂ ಹಣ್ಣುಗಳನ್ನು ಸೇವಿಸಬಾರದು. ಯಾವುದೇ ಸಮುದ್ರದ ಉತ್ಪನ್ನಗಳನ್ನು ಮುಟ್ಟಿದಾಗ ಸರಿಯಾಗಿ ಕೈತೊಳೆದು ಆಹಾರ ಪದಾರ್ಥ ಮುಟ್ಟುವುದು ಸೂಕ್ತ. ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಲ್ಲಿ ಮಕ್ಕಳು ಕೈಗಳನ್ನು ಸ್ವತ್ಛವಾಗಿ ತೊಳೆದು ಆಹಾರ ಉತ್ಪನ್ನ ಬಳಸುವ ಬಗ್ಗೆ ಅರಿವು ಮೂಡಿಸಬೇಕು ಎಂದು ಅವರು ಹೇಳಿದರು.

ಕಳೆದ ಸೆ.14 ರಿಂದ ಅ.2 ರವರೆಗೆ ಸ್ವಚ್ಚತಾ ಸೇವಾ ಅಭಿಯಾನವನ್ನು ಅಂದೋಲನದ ರೀತಿಯಲ್ಲಿ ನಡೆಸಲಾಗುತ್ತಿದೆ. ಸಾರ್ವಜನಿಕರು ತಮ್ಮ ಮನೆಯ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳಬೇಕು. ಸ್ಥಳೀಯ ಸಂಸ್ಥೆಗಳು ಸಾರ್ವಜನಿಕ ಸ್ಥಳಗಳು ಬಸ್‌ ನಿಲ್ದಾಣ ರೈಲ್ವೆ ನಿಲ್ದಾಣ, ಸಾರ್ವಜನಿಕ ಶೌಚಾಲಯಗಳಲ್ಲಿ ನೈರ್ಮಲ್ಯವನ್ನು ಕಾಪಾಡಲು ಹೆಚ್ಚಿನ ಆದ್ಯತೆ ವಹಿಸಬೇಕು ಎಂದು ಸೂಚನೆ ನೀಡಿದರು.

ವಿಬ್ರಿಯೊ ಕಾಲರಾ ಎಂಬ ಬ್ಯಾಕ್ಟಿರೀಯದಿಂದ ಕಲುಷಿತ ಆಹಾರ ತಿನ್ನುವುದರಿಂದ ಹರಡುತ್ತದೆ. ಸ್ವತ್ಛತೆಗೆ ಆದ್ಯತೆ ಕಡಿಮೆ ಇರುವ ಸ್ಥಳಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವುತ್ತದೆ. ಸೋಂಕು ಇರುವ ಆಹಾರ ಅಥವಾ ನೀರಿನ ಸೇವನೆಯಿಂದ ಬ್ಯಾಕ್ಟಿರೀಯಾ ದೇಹ ಪ್ರವೇಶಿಸುತ್ತದೆ. ಮನೆಗೆ ತರುವ ಎಲ್ಲ ರೀತಿಯ ತರಕಾರಿ ಹಣ್ಣು ಹಾಗೂ ಸಮುದ್ರ ಉತ್ಪನ್ನಗಳನ್ನು ಚೆನ್ನಾಗಿ ನೀರಿನಿಂದ ತೊಳೆದು ಸ್ವತ್ಛಗೊಳಿಸಿ ಬಳಸಬೇಕು. ತೀವ್ರ ಅತಿಸಾರ ವಾಂತಿ ಹಾಗೂ ನಿರ್ಜಲೀಕರಣ ರೋಗ ಲಕ್ಷಣಗಳು ಕಂಡುಬಂದರೆ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು  ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!