Sunday, October 13, 2024

ಮುನಿರತ್ನ ಸೇರಿದಂತೆ 7 ಜನರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು !

ಜನಪ್ರತಿನಿಧಿ (ಬೆಂಗಳೂರು) : ಗುತ್ತಿಗೆದಾರನೋರ್ವನಿಗೆ ಜೀವ ಬೆದರಿಕೆ, ಲಂಚ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈಗಾಗಲೇ ಎರಡು ಪ್ರಕರಣಗಳನ್ನು ಎದರಿಸುತ್ತಿರುವ ಮುನಿರತ್ನ ಹಾಗೂ ಆತನ ಗನ್ ಮ್ಯಾನ್ ವಿಜಯ್ ಕುಮಾರ್, ಸುಧಾಕರ್, ಕಿರಣ್ ಕುಮಾರ್, ಲೋಹಿತ್ ಗೌಡ, ಮಂಜುನಾಥ ಮತ್ತು ಲೋಕಿ ಎಂಬಾತರನ್ನು ಒಳಗೊಂಡು 7 ಜನರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ.

ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ನಿನ್ನೆ (ಬುಧವಾರ) ತಡರಾತ್ರಿ ಅತ್ಯಾಚಾರವೆಸಗಿರುವುದರ ಬಗ್ಗೆ ದೂರು ದಾಖಲಿಸಿದ್ದಾರೆ. ಖಾಸಗಿ ರೆಸಾರ್ಟ್ ನಲ್ಲಿ ಅತ್ಯಾಚಾರ ನಡೆದಿರುವುದಾಗಿ ಸಂತ್ರಸ್ತೆ ಡಿವೈಎಸ್ ಪಿ ದಿನಕರ ಶೆಟ್ಟಿ ಸಮ್ಮುಖದಲ್ಲಿ ಸಂತ್ರಸ್ತೆ ಹೇಳಿಕೆ ನೀಡಿದ್ದಾರೆ.

ಸಮಾಜ ಸೇವಕಿಯಾಗಿ ಗುರುತಿಸಿಕೊಂಡಿರುವ, ಬಿಜೆಪಿಯಲ್ಲೂ ಸಕ್ರಿಯವಾಗಿರುವ ತನ್ನ ಮೇಲೆ 2020ರಿಂದ 2022ರವರೆಗೆ ಅತ್ಯಾಚಾರ ನಡೆಸಿ ಹನಿಟ್ರ್ಯಾಪ್ ಗೆ ಬಳಸಿಕೊಂಡಿರುವ ಕುರಿತು ದೂರು ನೀಡಿದ್ದಾರೆ. ದೂರು ಪರಿಶೀಲಿಸಿದ ನಂತರ ಠಾಣೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇಂದು ಪೊಲೀಸರು ಘಟನೆ ನಡೆದ ಸ್ಥಳಕ್ಕೆ ತೆರಳಿ ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಸಂತ್ರಸ್ತೆ ನೀಡಿರುವ ದೂರಿನಲ್ಲಿ ಕೋವಿಡ್ ಸಂದರ್ಭದಲ್ಲಿ ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು. ಆಗ್ಗಾಗೆ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿದ್ದರು. ನಗ್ನವಾಗಿ ಇರುವಂತೆ ಕರೆ ಮಾಡಿ ಒತ್ತಾಯಿಸಿದಾಗ ಅದನ್ನು ನಿರಾಕರಿಸಿದ್ದೆ. ಒಮ್ಮೆ ಸ್ಥಳವೊಂದಕ್ಕೆ ಬರಲು ಹೇಳಿದ್ದರು. ನಾನು ಅಲ್ಲಿಗೆ ಹೋದಾಗ ತಬ್ಬಿಕೊಳ್ಳಲು ಮುಂದಾಗಿದ್ದರು. ಅದಕ್ಕೆ ಆಕ್ಷೇಪಿಸಿದಾಗ ರಾಜಕೀಯಕ್ಕೆ ಬರಬೇಕಾದರೆ ಇವೆಲ್ಲಾ ಕಾಮನ್ ಎಂದು ಹೇಳಿದ್ದರು. ಬಳಿಕ ಅತ್ಯಾಚಾರವೆಸಗಿದ್ದು, ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಸಿಸಿಟಿವಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿರುವ ವಿಡಿಯೋವನ್ನು ಎಡಿಟ್ ಮಾಡಿ ಹಂಚುತ್ತೇನೆ ಎಂದು ಹೆದರಿಸಿದ್ದರು. ವಿಡಿಯೋ ಇಟ್ಟುಕೊಂಡು ಹಲವು ಬಾರಿ ಮುನಿರತ್ನ ಅತ್ಯಾಚಾರವೆಸಗಿರುವುದಾಗಿ ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ.

ಈ ಮಧ್ಯೆ ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಎನ್ ಮುನಿರತ್ನ ಅವರ ಜಾಮೀನು ಅರ್ಜಿಯ ಆದೇಶವನ್ನು ಶಾಸಕರು/ಸಂಸದರ ವಿಶೇಷ ನ್ಯಾಯಾಲಯ ಗುರುವಾರದವರೆಗೆ ಕಾಯ್ದಿರಿಸಿದೆ. ಜಾಮೀನು ಕೋರಿ ಮುನಿರತ್ನ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಮೂರ್ತಿ ಸಂತೋಷ್ ಗಜಾನನ ಭಟ್ ಅವರು, ಆದೇಶವನ್ನು ಇಂದಿಗೆ ಕಾಯ್ದಿರಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!