spot_img
Wednesday, April 1, 2026
spot_img

ದ. ಕ ಸ್ಥಳೀಯ ಸಂಸ್ಥೆಗಳ ಪರಿಷತ್‌ ಕ್ಷೇತ್ರದ ಉಪ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ಜನಪ್ರತಿನಿಧಿ (ಉಡುಪಿ) : ಕೋಟ ಶ್ರೀನಿವಾಸ ಪೂಜಾರಿ ಅವರು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿರುವ ಕಾರಣ ತೆರವಾದ ವಿಧಾನ ಪರಿಷತ್ತಿನ ಉಪಚುನಾವಣೆಗೆ ದಿನಾಂಕ ಘೋಷಿಸಲಾಗಿದೆ. ಭಾರತೀಯ ಚುನಾವಣಾ ಆಯೋಗ ಸೆ.19ರಂದು ಚುನಾವಣೆ ಘೋಷಣೆ ಮಾಡಿ ಆದೇಶಿಸಿದೆ.

ವಿಧಾನ ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಅಕ್ಟೋಬರ್‌ 21ರಂದು ಮತದಾನ ನಡೆಯಲಿದೆ ಎಂದು ಆಯೋಗ ಘೋಷಣೆ ಮಾಡಿದೆ.

ಈ ಕ್ಷೇತ್ರದಿಂದ ಪರಿಷತ್‌ ಸದಸ್ಯರಾಗಿದ್ದ ಕೋಟ ಶ್ರೀನಿವಾಸ್‌ ಪೂಜಾರಿ ಅವರು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು. ಈ ಕಾರಣದಿಂದ ಅವರಿಂದ ತೆರವಾದ ವಿಧಾನ ಪರಿಷತ್ತಿನ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ನಾಮಪತ್ರ ಸಲ್ಲಿಕೆಗೆ ಅ.3 ಕೊನೆಯ ದಿನಾಂಕವಾಗಿದ್ದು, ಅ.21ರಂದು ಮತದಾನ ನಡೆಯಲಿದೆ. ಅ.21ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಅ.24ರಂದು ಮತ ಎಣಿಕೆ ನಡೆಯಲಿದೆ.

ಅ.3 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅ.21ರಂದು ಮತದಾನ ನಡೆಯಲಿದೆ. ಅ.21ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಅ.24ರಂದು ಮತ ಎಣಿಕೆ ನಡೆಯಲಿದೆ ಎಂದು ಆಯೋಗ ಘೋಷಿಸಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!