Sunday, October 13, 2024

ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಮೇಲೆ ಹಿಟ್ಲರ್ ಆಗಿದ್ದಾರೆ : ಶೋಭಾ ಕರಂದ್ಲಾಜೆ ಆಕ್ರೋಶ

ಜನಪ್ರತಿನಿಧಿ (ಬೆಂಗಳೂರು) : ರಾಜ್ಯದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಸೃಷ್ಟಿಯಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾದ ಮೇಲೆ ಹಿಟ್ಲರ್ ಆಗಿದ್ದಾರೆ. ಬಿಜೆಪಿಯ ಸಂಸದರು ಹಾಗೂ ಶಾಸಕರ ಮೇಲೆ ಎಫ್‍ಐಆರ್‌ಗಳು ದಾಖಲಾಗುತ್ತಿವೆ. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ವಿಪಕ್ಷದ ನಾಯಕ ಹಾಗೂ ಕೇಂದ್ರದ ಸಚಿವರ ಮೇಲೆ ಎಫ್‍ಐಆರ್ ದಾಖಲಿಸಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾಂಗ್ರೆಸ್‌ ಸರ್ಕಾರದ ವಿರುದ್ದಆಕ್ರೋಶ ಹೊರಹಾಕಿದ್ದಾರೆ.

ವರದಿಗಾರರಿಗೆ ಸ್ಪಂದಿಸಿ ಮಾತನಾಡಿದ ಕರಂದ್ಲಾಜೆ, ಪೊಲೀಸ್ ಅಧಿಕಾರಿ ಪರಶುರಾಮ ಆತ್ಮಹತ್ಯೆ ಮಾಡಿಕೊಂಡಿದ್ದರೂ ಕಾಂಗ್ರೆಸ್ ಶಾಸಕರ ಮೇಲೆ ಕ್ರಮ ಆಗಲಿಲ್ಲ. ಮಾಜಿ ಸಚಿವ ನಾಗೇಂದ್ರ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ. ಆದರೆ ಎಸ್ಐಟಿ ಚಾರ್ಜ್​​ಶೀಟ್​​ನಲ್ಲಿ ಅವರ ಹೆಸರೇ ಇಲ್ಲ. ರಾಜ್ಯವನ್ನು ಏನು ಮಾಡಲು ಹೊರಟಿದ್ದೀರಿ ಸಿದ್ದರಾಮಯ್ಯನವರೇ ಎಂದು ಶೋಭಾ ಪ್ರಶ್ನಿಸಿದರು. ಕರ್ನಾಟಕವನ್ನು ನೀವೇನು ಮಾಡಲು ಹೊರಟಿದ್ದೀರಿ? ನಾಗಮಂಗಲದಲ್ಲಿ ಘಟನೆ ನಡೆಯಿತು. ಇತಿಹಾಸದಲ್ಲಿ ಮೊದಲ ಬಾರಿಗೆ ಕರ್ನಾಟಕದಲ್ಲಿ ಗಣೇಶ ಚತುರ್ಥಿಯ ಸಂದರ್ಭದಲ್ಲಿ ಗಣೇಶನನ್ನು ಪೊಲೀಸ್ ವ್ಯಾನಿನಲ್ಲಿ ಕರೆದುಕೊಂಡು ಹೋಗಿ ವಿಸರ್ಜನೆ ಮಾಡುವ ಘಟನೆ ನಡೆದಿದೆ. ಯಾಕಾಗಿ ಹೀಗಾಗಿದೆ? ಎಂದು ಪ್ರಶ್ನಿಸಿದರು.

ಆರ್.ಅಶೋಕ್ ಮತ್ತು ನಾನು ಮಾಡಿದ ತಪ್ಪೇನು? ಯಾವ ಅಪರಾಧಕ್ಕಾಗಿ ನೀವು ಎಫ್‍ಐಆರ್ ಹಾಕಿದ್ದೀರಿ? ನಾವು ನಿಮ್ಮನ್ನು ಕೇಳಿದ್ದೇ ನಮ್ಮ ಅಪರಾಧ. ನಿಮ್ಮನ್ನು ಪ್ರಶ್ನಿಸಿದ್ದೇ ಅಪರಾಧ. ಇವತ್ತು ಅಲ್ಪಸಂಖ್ಯಾತರನ್ನು ಓಲೈಕೆ ಮಾಡುವುದಕ್ಕಾಗಿ ಪ್ರಜಾತಂತ್ರವನ್ನು ಕಗ್ಗೊಲೆ ಮಾಡುವ ಕೆಲಸ ಮಾಡುತ್ತಿದ್ದೀರಿ ಎಂದು ವಾಗ್ದಾಳಿ ನಡೆಸಿದರು.

ಪೊಲೀಸರು ನಮ್ಮನ್ನು ಬಂಧಿಸಬಹುದು, ನಾವು ಬಂಧನಕ್ಕೆ ಒಳಗಾಗುತ್ತೇವೆ. ನಾವು ಹೋರಾಟ ಮಾಡಿಕೊಂಡು ಬಂದವರು, ಹೋರಾಟ ಮುಂದುವರೆಸುತ್ತೇವೆ. ನಾವು ಗೊಡ್ಡು ಬೆದರಿಕೆಗೆ ಹೆದರಿಕೊಂಡು ಓಡಿ ಹೋಗಲ್ಲ. ಇದನ್ನೆಲ್ಲಾ ಕಾನೂನು ಮೂಲಕವೇ ಎದುರಿಸುತ್ತೇವೆ ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!