Saturday, October 12, 2024

ಹೆಚ್ಚಿನ ಪ್ರಮಾಣದಲ್ಲಿ ಅನಸ್ತೇಶಿಯಾ ನೀಡಿಕೆ, ಮಹಿಳಾ ಅಧಿಕಾರಿಯೊಬ್ಬರ ಸಾವು | ವೈದ್ಯರ ನಿರ್ಲಕ್ಷ್ಯ : ಆರೋಪ

ಜನಪ್ರತಿನಿಧಿ (ಜೈಪುರ) :  ರಾಜಸ್ಥಾನದ ಮಹಿಳಾ ಅಧಿಕಾರಿಯೊಬ್ಬರು ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿರುವ ಘಟನೆ ನಡೆದಿದ್ದು, ವೈದ್ಯರ ದಿವ್ಯ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಸಂಬಂಧಿಕರು ಆರೋಪಿಸಿರುವುದಾಗಿ ರಾಷ್ಟ್ರೀಯ ಸುದ್ದಿ ವಾಹಿನಿಗಳಲ್ಲಿ ವರದಿಯಾಗಿವೆ.

ರಾಜಸ್ಥಾನದದ ಜೋಧ್‌ಪುರದಲ್ಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಆಗಿ ನೇಮಕಗೊಂಡಿದ್ದ ಪ್ರಿಯಾಂಕಾ ಬಿಷ್ಣೋಯ್ (33) ಅವರು ಜೋಧ್‌ಪುರದ ಆಸ್ಪತ್ರೆಯೊಂದರಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಬಳಿಕ ಅವರ ಆರೋಗ್ಯ ಸ್ಥಿತಿ ತೀವ್ರ ಹದಗೆಟ್ಟಿತ್ತು. ಅವರನ್ನು ಹೆಚ್ಚಿನ ಚಿಕಿತ್ಸೆಗೆ ಅಹಮದಾಬಾದ್‍ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

2016ರ ಬ್ಯಾಚ್ ರಾಜಸ್ಥಾನ ಆಡಳಿತ ಸೇವೆಗಳ ಅಧಿಕಾರಿ ಜೋಧ್‍ಪುರದ ವಸುಂಧರಾ ಆಸ್ಪತ್ರೆಯಲ್ಲಿ ಈ ತಿಂಗಳ ಆರಂಭದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಹೆಚ್ಚಿನ ಪ್ರಮಾಣದ ಅರಿವಳಿಕೆ(ಅನಸ್ತೇಶಿಯಾ) ನೀಡಿದ ನಂತರ ಕೋಮಾ ಸ್ಥಿತಿಗೆ ತಲುಪಿದ್ದರು ಎಂದು ಕುಟುಂಬ ಆರೋಪಿಸಿದೆ.

ಬಿಷ್ಣೋಯ್ ಸಮುದಾಯದ ನಾಯಕ ದೇವೇಂದ್ರ ಬುಡಿಯಾ ಮಹಿಳಾ ಅಧಿಕಾರಿಯ ಸಾವಿನ ಹಿಂದೆ ಪಿತೂರಿ ಇದೆ ಎಂದು ಆರೋಪಿಸಿದ್ದು, ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ಜೋಧಪುರ ಜಿಲ್ಲಾಧಿಕಾರಿ ಗೌರವ್ ಅಗರವಾಲ್ ಐವರು ಅಧಿಕಾರಿಗಳ ತಂಡದಿಂದ ತನಿಖೆಗೆ ಆದೇಶಿಸಿದ್ದಾರೆ. ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರು ಬಿಷ್ಣೋಯ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ವೈದ್ಯಕೀಯ ನಿರ್ಲಕ್ಷ್ಯದ ಆರೋಪದ ನಡುವೆಯೇ ವಸುಂಧರಾ ಆಸ್ಪತ್ರೆಯ ನಿರ್ದೇಶಕ ಡಾ.ಸಂಜಯ್ ಮಕ್ವಾನಾ ಈ ಕುರಿತು ಪ್ರತಿಕ್ರಿಯಿಸಿದ್ದಾರೆ. ಸೆಪ್ಟೆಂಬರ್ 5 ರಂದು ತನ್ನ ಶಸ್ತ್ರಚಿಕಿತ್ಸೆಯ ನಂತರ, ಸಂಜೆ ಮತ್ತು ರಾತ್ರಿಯಿಡೀ ಪ್ರಿಯಾಂಕಾ ಸ್ಥಿರವಾಗಿದ್ದರು, ಆದರೆ ಬೆಳಿಗ್ಗೆ ಅವರಿಗೆ ಸಮಸ್ಯೆ ಅನುಭವಿಸಲು ಪ್ರಾರಂಭಿಸಿದರು.

ರಕ್ತ ಪರೀಕ್ಷೆಯಲ್ಲಿ ಎಲೆಕ್ಟ್ರೋಲೈಟ್ ಅಸಮತೋಲನ ಇರುವುದು ಕಂಡು ಬಂತು. ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ICU ಗೆ ವರ್ಗಾಯಿಸಲಾಯಿತು. ಇದರ ಹೊರತಾಗಿಯೂ,ಅವರಿಗೆ ಸಮಸ್ಯೆ ಮುಂದುವರೆಯಿತು. ಕಿಬ್ಬೊಟ್ಟೆಯ ಸ್ಕ್ಯಾನ್ ಮತ್ತು ಎಕೋಕಾರ್ಡಿಯೋಗ್ರಾಮ್ ಸೇರಿದಂತೆ ಸರಣಿ ಪರೀಕ್ಷೆಗಳನ್ನು ನಡೆಸಲಾಯಿತು ಎಂದು ಡಾ ಮಕ್ವಾನಾ ವಿವರಿಸಿದ್ದಾರೆ.

ಆಕೆಯ ಅಸ್ವಸ್ಥತೆಗೆ ಕಾರಣವನ್ನು ತಿಳಿಯಲು ನರವಿಜ್ಞಾನಿಗಳನ್ನು ಸಹ ಸಂಪರ್ಕಿಸಲಾಯಿತು. ಅಂತಿಮವಾಗಿ, ಹೆಚ್ಚಿನ ಚಿಕಿತ್ಸೆಗಾಗಿ ಕುಟುಂಬವು ಅವರನ್ನು ಅಹಮದಾಬಾದ್‌ಗೆ ವರ್ಗಾಯಿಸಲು ವಿನಂತಿಸಿತು. ಆಕೆ ಅಲ್ಲಿಗೆ ಬಂದಾಗ, CT ಸ್ಕ್ಯಾನ್ ನಡೆಸಲಾಯಿತು, ಅದರಲ್ಲಿ ಮೆದುಳಿನ ರಕ್ತಸ್ರಾವವಾಗುತ್ತಿರುವುದು ತಿಳಿದು ಬಂತು ಎಂದು ವಿವರಿಸಿದ್ದಾರೆ

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!