spot_img
Wednesday, April 1, 2026
spot_img

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೇಡಿಕೆಯಂತೆ ಅಕಾಡೆಮಿಗಳ ಮೊತ್ತ ಹೆಚ್ಚಳ : ಸಿಎಂ ಸಿದ್ದರಾಮಯ್ಯ ಭರವಸೆ

ಜನಪ್ರತಿನಿಧಿ (ಬೆಂಗಳೂರು) : ಕಲಾವಿದರ ಮಾಸಾಶನ 3,000 ರೂಪಾಯಿಗೆ ಏರಿಸಲಾಗುವುದು. ನಮ್ಮ ಸರ್ಕಾರ ನಿರಂತರವಾಗಿ ಕಲೆ, ಸಾಹಿತ್ಯ, ಸಂಸ್ಕೃತಿ ರಂಗಭೂಮಿಯನ್ನು ಬೆಂಬಲಿಸಿಕೊಂಡು ಬಂದಿದೆ. ನಮ್ಮ‌ ಸರ್ಕಾರದ ಅವಧಿಯಲ್ಲಿ ಅಕಾಡೆಮಿಗಳಿಗೆ ಕೊಡುತ್ತಿದ್ದ ಅನುದಾನದ ಮೊತ್ತವನ್ನು ಬಿಜೆಪಿ ಸರ್ಕಾರ ಕಡಿಮೆ ಮಾಡಿತ್ತು. ನಾವು ಅದನ್ನು ಮತ್ತೆ ಹೆಚ್ಚಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ನಾಟಕ ಅಕಾಡೆಮಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, 2023, 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೇಡಿಕೆಯಂತೆ ಅಕಾಡೆಮಿಗಳ ಮೊತ್ತವನ್ನು ಹೆಚ್ಚಿಸುವ ಜೊತೆಗೆ ಕಲಾವಿದರ ಮಾಸಾಶನವನ್ನು 2,500 ರೂ.ಗಳಿಂದ 3,000 ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಹೇಳಿದರು.

ಬಿಜೆಪಿ ಸರ್ಕಾರ ಕಲೆ ಸಂಸ್ಕೃತಿಗೆ ದ್ರೋಹ ಬಗೆದು ಪ್ರಶಸ್ತಿ ವಿತರಣೆ ನಿಲ್ಲಿಸಿತ್ತು. ಮುಂದಿನ ವರ್ಷದಿಂದ ಆಯಾ ವರ್ಷದ ಪ್ರಶಸ್ತಿಯನ್ನು ಆಯಾ ವರ್ಷವೇ ನೀಡಲಾಗುವುದು ಎಂದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!