spot_img
Wednesday, April 1, 2026
spot_img

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಹಂಪನಾ ಆಯ್ಕೆ !? | ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆ ಶೀಘ್ರ : ಸಿಎಂ ಸಿದ್ದರಾಮಯ್ಯ

ಜನಪ್ರತಿನಿಧಿ (ಮೈಸೂರು) : ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ. ಜಿಲ್ಲಾಡಳಿತ, ಮೈಸೂರು ಉಸ್ತುವಾರಿ ಸಚಿವರು ಅವರಿಗೆ ಆಹ್ವಾನ ನೀಡಲಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ವರದಿಗಾರರಿಗೆ ಸ್ಪಂದಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಇನ್ನು, ಶಾಸಕ ಮುನಿರತ್ನ ಅವರ ಮೇಲೆ ಮೂರು ಪ್ರಕರಣಗಳು ದಾಖಲಾಗಿದ್ದು, ಅವುಗಳನ್ನು ಎಸ್.ಐ ಟಿಗೆ ವಹಿಸಬೇಕೆಂದು ಇಂದು ಒಕ್ಕಲಿಗ ಸಮುದಾಯದ ಸಚಿವರು ಹಾಗೂ ಶಾಸಕರು ಮನವಿ ಮಾಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ಅವರೊಂದಿಗೆ ಮಾತನಾಡಿ ತೀರ್ಮಾನಿಸುತ್ತೇವೆ ಎಂದು ಹೇಳಿದ್ದಾರೆ.

ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮರು ಪರೀಕ್ಷೆಯನ್ನು ಆದಷ್ಟೂ ಶೀಘ್ರದಲ್ಲಿಯೇ ಏರ್ಪಡಿಸುವಂತೆ ಕೆ.ಪಿ.ಎಸ್.ಸಿ ಗೆ ಸೂಚಿಸಲಾಗಿದೆ. ಕಾನ್‌ಸ್ಟೆಬಲ್ ಹುದ್ದೆಗಳಿಗೆ ವಯೋಮಿತಿಯನ್ನು 27 ರಿಂದ 33 ವರ್ಷಕ್ಕೆ ಏರಿಸಬೇಕೆಂಬ ಬೇಡಿಕೆ ಇದ್ದು, ಒಂದು ಬಾರಿಯ ತೀರ್ಮಾನ ಕೈಗೊಳ್ಳುವಂತೆ ಗೃಹ ಸಚಿವರಿಗೆ ತಿಳಿಸಿರುವುದಾಗಿ ಮಾಹಿತಿ ನೀಡಿದ್ದಾರೆ.

ಇನ್ನು, ಈ ಬಾರಿ ರಾಜ್ಯದಲ್ಲಿ 60,000 ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯಾಗಿತ್ತು. ದಾವಣಗೆರೆಯಲ್ಲಿ ಕಲ್ಲು ತೂರಾಟ ನಡೆದಿದ್ದು, ನಾಗಮಂಗಲದಲ್ಲಿ ಗಲಭೆ ನಡೆದಿದೆ. ಇಲ್ಲಿ ಪೊಲೀಸರ ಕರ್ತವ್ಯ ನಿರ್ಲಕ್ಷ್ಯ ಕಂಡುಬಂದಿದ್ದು, ಡಿ.ವೈ.ಎಸ್.ಪಿ ಅವರನ್ನು ಅಮಾನತು ಮಾಡಲಾಗಿದೆ.  ಕೋಮು ಗಲಭೆಗಳಿಗೆ ಬಿಜೆಪಿ ಪ್ರಚೋದನೆ ನೀಡುತ್ತಿದೆ. ಸಮಾಜದ ಶಾಂತಿಗೆ ಭಂಗವುಂಟುಮಾಡುವುದು ಬಿಜೆಪಿಯ ಮುಖ್ಯ ಉದ್ದೇಶವಾಗಿದ ಎಂದು ಅವರು ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಯಡಿಯೂರಪ್ಪರವರ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣದಲ್ಲಿ ತನಿಖೆಗೆ ಆದೇಶವಾಗಿದೆ, ಆದರೆ 2021 ಲೋಕಾಯುಕ್ತದವರು ತನಿಖೆ ಮಾಡಿಲ್ಲ. ನಿನ್ನೆ ದಿನೇಶ್ ಗುಂಡೂರಾವ್, ಕೃಷ್ಣಬೈರೇಗೌಡ, ಸಂತೋಷ್ ಲಾಡ್ ಸೇರಿದಂತೆ ನಮ್ಮ ಸಚಿವರು ಈ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಡಿನೋಟಿಫೈ ಪ್ರಕರಣದ ಜಮೀನು ಬಹಳ ಬೆಲೆಬಾಳುವಂಥದ್ದಾಗಿದ್ದು, ಕುಮಾರಸ್ವಾಮಿಯವರು ತಮ್ಮ ಸಂಬಂಧಿಕರಿಗೆ ಡಿನೋಟಿಫೈ ಮಾಡಿ,  ಜಿಪಿಓ ಆಗಿದೆ. ಅಧಿಕಾರಿಗಳು ಈ ಕ್ರಮವನ್ನು ಕಾನೂನಾತ್ಮಕವಲ್ಲವೆಂದರೂ ಈ ರೀತಿ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪಡೆದು ಪರಿಶೀಲನೆ ನಡೆಸಲಾಗುವುದು ಎಂದರು.

ವಿಪಕ್ಷಗಳು ಗಾಜಿನ ಮನೆಯಲ್ಲಿ ಕುಳಿತು ಸರ್ಕಾರದ ಮೇಲೆ ಆರೋಪ ಹೊರಸುತ್ತಿವೆ. ನಾವು ಯಾರ ಮೇಲೆಯೂ ಆರೋಪ ಹೊರಿಸುವ ಕೆಲಸವನ್ನು ಮಾಡುತ್ತಿಲ್ಲ. ಕುಮಾರಸ್ವಾಮಿಯವರು ಹಿಟ್ ಎಂಡ್ ರನ್ ಗಿರಾಕಿ, ಅವರು ತಮ್ಮ ಯಾವ ಆರೋಪಕ್ಕೂ ತಾರ್ಕಿಕ ಅಂತ್ಯ ಕಾಣಿಸುವುದಿಲ್ಲ. ಕುಮಾರಸ್ವಾಮಿಯವರು ಕೇಂದ್ರ ಸಚಿವರಾಗಿದ್ದು, ಜವಾಬ್ದಾರಿಯುತವಾಗಿ ವರ್ತಿಸಬೇಕು. ವಿಷಯದ ಸತ್ಯಾಸತ್ಯತೆಯನ್ನು ಅರಿತು ಮಾತನಾಡಬೇಕು ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!