Saturday, October 12, 2024

ತಿರುಪತಿ ಲಡ್ಡು ವಿವಾದ : ಆಂಧ್ರ ಸರ್ಕಾರದಿಂದ ವರದಿ ಕೇಳಿದ ಕೇಂದ್ರ !

ಜನಪ್ರತಿನಿಧಿ (ನವದೆಹಲಿ) :  ತಿರುಪತಿ-ತಿರುಮಲ ದೇಗುಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬ ಬಳಸಲಾಗುತ್ತದೆ ಎಂಬ  ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಆಂಧ್ರ ಪ್ರದೇಶ ಸರ್ಕಾರದಿಂದ ಈ ಸಂಬಂಧಿಸಿದಂತೆ ವರದಿ ಕೇಳಿದೆ.

ವೆಂಕಟರಮಣ ಸ್ವಾಮಿ ದೇವಸ್ಥಾನದ ಭಕ್ತರಿಗೆ ಪ್ರಸಾದವಾಗಿ ನೀಡುವ ಲಡ್ಡು ತಯಾರಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿದೆ ಎಂಬ ಆಂಧ್ರಪ್ರದೇಶದ ಸಿಎಂ ಎನ್.ಚಂದ್ರಬಾಬು ನಾಯ್ಡು ಅವರ ಆರೋಪದ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ಅವರು ಆಂಧ್ರಪ್ರದೇಶ ಮುಖ್ಯಮಂತ್ರಿ ಅವರಿಗೆ ಸವಿವರವಾದ ವರದಿ ಕೇಳಿದ್ದಾರೆ.

ಈ ಸಂಬಂಧಿಸಿಂತೆ ಪ್ರತಿಕ್ರಿಯಿಸಿದ ನಡ್ಡಾ, ಲಡ್ಡುಗಳನ್ನು ದೇವಾಲಯಕ್ಕೆ ಭೇಟಿ ನೀಡುವ ಕೋಟಿಗಟ್ಟಲೆ ಭಕ್ತರಿಗೆ ನೀಡಲಾಗುತ್ತದೆ. ಇದರಿಂದಾಗಿ ಸಿಎಂ ಏನೇ ಹೇಳಿದರೂ ಅದು ಗಂಭೀರ ಮತ್ತು ಕಳವಳಕಾರಿ ವಿಷಯವಾಗಿದೆ. ಈ ಆರೋಪದ ವಿರುದ್ಧ ಕೂಲಂಕುಶ ತನಿಖೆ ನಡೆಸುವ ಅಗತ್ಯವಿದೆ. ಅಲ್ಲದೇ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.

“ಈ ಸಂಬಂಧಿಸಿಂತೆ ಪೂರಕವಾದ ಲಭ್ಯವಿರುವ ಸವಿವರವಾದ ವರದಿಯನ್ನು ನೀಡುವಂತೆ ನಾನು ಮುಖ್ಯಮಂತ್ರಿವರಿಗೆ ಸೂಚಿಸಿದ್ದೇನೆ. ವರದಿಯನ್ನು ಪರಿಶೀಲಿಸಿ ನಾನು ರಾಜ್ಯ ನಿಯಂತ್ರಕರೊಂದಿಗೆ ಮಾತನಾಡಿ ಬಳಿಕ ಈ ಬಗ್ಗೆ ತನಿಖೆ ನಡೆಸುತ್ತೇನೆ. ಆಹಾರ ಸುರಕ್ಷತಾ ಮಾನದಂಡಗಳ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಸದ್ಯಕ್ಕೆ ನಾನು ವರದಿ ಕೇಳಿದ್ದು, ಪರಿಶೀಲಿಸುತ್ತೇವೆ ಎಂದು ಹೇಳಿದ್ದಾರೆ.

Tirupati Prasadam row : “Will examine and take suitable action,” says Health Minister JP Nadda

ಈ ಹಿಂದೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ್ದ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು, ಈ ಹಿಂದಿನ ಸಿಎಂ ವೈಎಸ್‍ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಅಧಿಕಾರದಲ್ಲಿದ್ದಾಗ ತಿರುಪತಿ ಲಡ್ಡು ತಯಾರಿಕೆಗೆ ಬಳಸಿದ ತುಪ್ಪದ ಮಾದರಿಗಳಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿದೆ ಎಂದು ಆರೋಪಿಸಿದ್ದರು. ಅಲ್ಲದೇ ಈ ಬಗ್ಗೆ ಗುಜರಾತ್‍ನ ಸರ್ಕಾರಿ ಲ್ಯಾಬ್‍ನ ವರದಿಯನ್ನು ಅವರು ಉಲ್ಲೇಖಿಸಿದ್ದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!