Sunday, October 13, 2024

ಮೋದಿ ಮೂರು ದಿನಗಳ ಅಮೇರಿಕಾ ಪ್ರವಾಸ ! ಕ್ವಾಡ್ ಶೃಂಗಸಭೆಯಲ್ಲಿ ಭಾಗಿ.

ಜನಪ್ರತಿನಿಧಿ (ನವದೆಹಲಿ) : ಪ್ರಧಾನಿ ಮೋದಿ ಇಂದು(ಶನಿವಾರ) ಬೆಳಗ್ಗೆ ಮೂರು ದಿನಗಳ ಅಮೆರಿಕ ಪ್ರವಾಸಕ್ಕೆ ತೆರಳಲಿದ್ದಾರೆ. ಅಮೆರಿಕದ ವಿಲ್ಮಿಂಗ್ಟನ್ ಗೆ ತೆರಳಲಿರುವ ಪ್ರಧಾನಿ ಮೋದಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರ ತವರು ರಾಜ್ಯ ಡೆಲವಾರೆಯಲ್ಲಿ ನಡೆಯಲಿರುವ ಕ್ವಾಡ್ ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಭಾರತ, ಆಸ್ಟ್ರೇಲಿಯಾ ಮತ್ತು ಜಪಾನ್ ನಾಯಕರಿಗೆ ಆತಿಥ್ಯ ನೀಡಲಿರುವ ಅಧ್ಯಕ್ಷ ಜೋ ಬೈಡನ್ ಅವರು ನಂತರ ಪ್ರತ್ಯೇಕ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಧಾನ ಮಂತ್ರಿಗಳು ಅಮೆರಿಕ ಪ್ರವಾಸ ಕೈಗೊಳ್ಳುತ್ತಿರುವ ಬಗ್ಗೆ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿರುವ ಪ್ರಧಾನ ಮಂತ್ರಿ ಕಚೇರಿ, ಪ್ರಧಾನ ಮಂತ್ರಿಗಳು ಕ್ವಾಡ್ ಶೃಂಗಸಭೆ, ಸಮುದಾಯ ಕಾರ್ಯಕ್ರಮ, ಭವಿಷ್ಯದ ಶೃಂಗಸಭೆ ಮತ್ತು ಇತರ ದ್ವಿಪಕ್ಷೀಯ ಸಭೆಗಳನ್ನು ಉದ್ದೇಶಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದೆ.

‘ಇಂಡೋ-ಪೆಸಿಫಿಕ್‌ ಪ್ರದೇಶದಲ್ಲಿ ಶಾಂತಿ, ಸಮೃದ್ಧಿಗಾಗಿ ಕೆಲಸ ಮಾಡುವ ಪ್ರಮುಖ ಗುಂಪಾಗಿ ಕ್ವಾಡ್ ಹೊರಹೊಮ್ಮಿದೆ’ ಎಂದು ಪ್ರಧಾನಿ ಮೋದಿ ಅವರು ಯುಎಸ್ ಭೇಟಿ ಸಂದರ್ಭದಲ್ಲಿ ಹೇಳಿದ್ದಾರೆ.

ನ್ಯೂಯಾರ್ಕ್‌ನ ಲಾಂಗ್ ಐಲ್ಯಾಂಡ್‌ನಲ್ಲಿರುವ ನಸ್ಸೌ ವೆಟರನ್ಸ್ ಮೆಮೋರಿಯಲ್ ಕೊಲಿಸಿಯಂನಿಂದ ನಾಳೆ ಪ್ರಧಾನಮಂತ್ರಿಗಳು ಭಾರತೀಯ ಸಮುದಾಯದವರನ್ನು ಭೇಟಿ ಮಾಡಿ ಅವರನ್ನು ಉದ್ದೇಶಿಸಿ ಮಾತನಾಡುವ ಕಾರ್ಯಕ್ರಮವಿದ್ದು ಅದಕ್ಕಾಗಿ ಸಿದ್ಧತೆ ಮಾಡಿಕೊಳ್ಳಲಾಗಿದೆ.

https://x.com/ANI/status/1837266995441717699

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!