Sunday, October 13, 2024

ಶಾಲಾ ಮಕ್ಕಳಿಗೆ ಅ.3-20 ದಸರಾ ರಜೆ ಘೋಷಣೆ

ಜನಪ್ರತಿನಿಧಿ (ಬೆಂಗಳೂರು) : ಈ ಬಾರಿ ರಾಜ್ಯದಲ್ಲಿ ಅಕ್ಟೋಬರ್ 3ರಿಂದ 20ರವರೆಗೆ ಶಾಲೆಗಳಿಗೆ ದಸರಾ ರಜೆ ಘೋಷಣೆ ಮಾಡಲಾಗಿದೆ. ಈ ಹಿಂದಿನ ವರ್ಷಗಳಲ್ಲಿ ಕರಾವಳಿ ಭಾಗದಲ್ಲಿ ದಸರಾ ರಜೆಯಲ್ಲಿ ಸ್ವಲ್ಪ ಮಾರ್ಪಾಡು ಮಾಡಲಾಗುತ್ತಿತ್ತು. ಆದರೆ, ಈ ಬಾರಿ ರಾಜ್ಯದ ಎಲ್ಲಾ ಶಾಲೆಗಳಿಗೆ ಒಂದೇ ಮಾರ್ಗಸೂಚಿ ರೂಪಿಸಿ ಆದೇಶಿಸಿದೆ.

ಅ.3 ರಿಂದ 20ರ ತನಕ ಅಂದರೆ 17 ದಿನಗಳು ಶಾಲಾ ಮಕ್ಕಳಿಗೆ ದಸರಾ ರಜೆ ದೊರಕಲಿದೆ. ಅಕ್ಟೋಬರ್ 21ರಿಂದ 2ನೇ ಅವಧಿಯು ಆರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ನಡೆಯಲಿದೆ. 2024-2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳ ಆರಂಭಕ್ಕೂ ಮುನ್ನವೇ ಪ್ರಕಟಿಸಿತ್ತು. ಶೈಕ್ಷಣಿಕ ವರ್ಷದ ಮೊದಲ ಅವಧಿಯು ಅ.2ರ ತನಕ ಇರಲಿದೆ. ಸೆ.23ರಿಂದ 30ರವರೆಗೆ ಮಧ್ಯಂತರ ಪರೀಕ್ಷೆಗಳು ನಡೆಯಲಿವೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!