spot_img
Thursday, April 2, 2026
spot_img

ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಜಲಜಾಗೃತಿ ಕಾರ್ಯಕ್ರಮ

ಹೆಮ್ಮಾಡಿ: ರೋಟರಿ ಕ್ಲಬ್ ಗಂಗೊಳ್ಳಿ ಆಯೋಜನೆಯಲ್ಲಿ ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿಯಲ್ಲಿ ಜಲಜಾಗೃತಿ ಕಾರ್ಯಕ್ರಮ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಗಂಗೊಳ್ಳಿ ಅಧ್ಯಕ್ಷೆ ಚಂದ್ರಕಲಾ ಎಸ್.ತಾಂಡೇಲ್ ವಹಿಸಿದ್ದರು.

ರೋಟರಿ ಜಿಲ್ಲಾ ಗವರ್ನರ್ ಸಿ.ಎ.ದೇವಾನಂದ್ ಮುಖ್ಯ ಅತಿಥಿಯಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ನೆಲ-ಜಲ-ಪರಿಸರ ಜಿಲ್ಲಾ ಸಂಯೋಜಕರಾದ ಶಿವಾನಂದ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾಲೇಜಿನ ಉಪ ಪ್ರಾಂಶುಪಾಲರಾದ ರಮೇಶ ಪೂಜಾರಿ ಉಪಸ್ಥಿತರಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಜ್ಯ ಸಂಪನ್ಮೂಲ ವ್ಯಕ್ತಿ ಶ್ರೀ ರತ್ನ ಶ್ರೀ ಜೋಸೆಫ್ ಜಿ.ಎಮ್ ರೆಬೆಲ್ಲೊ ರವರು ಮಾತನಾಡಿ ಜಲಜಾಗೃತಿಯ ಕುರಿತಾಗಿ ಅರಿವು ಮೂಡಿಸಿದರು. ಮಳೆಕೊಯ್ಲು, ಜಲ ಮರುಪೂರಣ, ಜಲಕ್ಷಾಮ, ದ್ರವ ತ್ಯಾಜ್ಯ ಈ ಪ್ರಮುಖ ವಿಚಾರಗಳ ಕುರಿತು ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಬೋಧಕ, ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿ ಶ್ರೀಮತಿ ರಂಜಿತಾ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!