spot_img
Tuesday, February 18, 2025
spot_img

ಡಾ.ನಾ ಮೊಗಸಾಲೆ ಅವರಿಗೆ ಕಾರ್ಕಡ ಗೆಳೆಯರ ಬಳಗದ ಕಾರಂತ ಪುರಸ್ಕಾರ-2024

ಕೋಟ: ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ, ಪ್ರತಿ ವರ್ಷ ಗೆಳೆಯರ ಬಳಗ, ಕಾರಂತ ಪುರಸ್ಕಾರ- 2024 ಪ್ರಶಸ್ತಿಗೆ ನಾಡಿನ ಹಿರಿಯ ಸಾಹಿತಿ, ಸಂಘಟಕ, ಕವಿ , ಕಾದಂಬರಿಕಾರ, ಸಾಂಸ್ಕೃತಿಕ ಚಿಂತಕ, ಡಾ.ನಾ ಮೊಗಸಾಲೆ ಆಯ್ಕೆಗೊಳಿಸಲಾಗಿದೆ.

ಕಾರಂತರಂತೆ ಸಂಘಟನೆ, ಸಾಹಿತ್ಯ ಕ್ಷೇತ್ರದಲ್ಲಿ ಅದರಲ್ಲೂ ಕಾದಂಬರಿಕಾರರಾಗಿ, ಕಥೆಗಾರರಾಗಿ ಕವಿಯಾಗಿ, ಮೊಗಸಾಲೆ ಯವರ ಸಾಧನೆಯನ್ನು ಗುರುತಿಸಿ ಈ ಗೌರವ ನೀಡಲಿದೆ.

ಈ ಹಿಂದೆ ಶ್ರೀಮತಿ ಮಾಲಿನಿ ಮಲ್ಯ, ಎಸ್. ನಾರಾಯಣ ರಾವ್, ಪೇತ್ರಿ ಮಾಧವ ನಾಯಕ್, ಶ್ರೀನಿವಾಸ ಸಾಸ್ತಾನ, ಹಿರಿಯಡ್ಕ ಗೋಪಾಲರಾವ್, ಎಚ್. ಇಬ್ರಾಹಿಂ ಸಾಹೇಬ್, ಪಾಂಡೇಶ್ವರ ಚಂದ್ರಶೇಖರ ಚಡಗ, ಬನ್ನಂಜೆ ಸಂಜೀವ ಸುವರ್ಣ, ವೈದೇಹಿ ಅವರಿಗೆ ಕಾರಂತ ಪುರಸ್ಕಾರ ಪ್ರದಾನ ಮಾಡಲಾಗಿದೆ.

ಗೆಳೆಯರ ಬಳಗ ಕಾರಂತ ಪುರಸ್ಕಾರ-2024 ನ್ನು ಅಕ್ಟೋಬರ್ 19 ರ ಶನಿವಾರ ಸಂಜೆ ಕಾರ್ಕಡ ಗಿರಿಜಾ ಕಲ್ಯಾಣ ಮಂಟಪದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷರಾದ ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರ ಅಧ್ಯಕ್ಷತೆಯಲ್ಲಿ ಜರಗಲಿದೆ. ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಎಂದು ಬಳಗದ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ ತಿಳಿಸಿದ್ದಾರೆ.

 

Related Articles

Stay Connected

21,961FansLike
3,912FollowersFollow
22,200SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!