Sunday, October 13, 2024

ತರಾತುರಿಯಲ್ಲಿ ಕಸ್ತೂರಿ ರಂಗನ್ ವರದಿ ಅನುಷ್ಠಾನ ಬೇಡ- ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದ ಶಾಸಕ ಗುರುರಾಜ್ ಗಂಟಿಹೊಳೆ

ಬೈಂದೂರು: ಜಡ್ಕಲ್-ಮುದುರು ಗ್ರಾಮ ವ್ಯಾಪ್ತಿಯನ್ನು ಯಾವುದೇ ಕಾರಣಕ್ಕೂ ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸುವುದು ಸರಿಯಲ್ಲ. ಇಲ್ಲಿ ಅನೇಕ ವರ್ಷಗಳಿಂದ ಹಲವು ಕುಟುಂಬ ನೆಲೆಯಾಗಿ ಜೀವನ ನಡೆಸಿಕೊಂಡು ಬಂದಿದೆ. ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದ ಈ ಭಾಗದಲ್ಲಿ ಸಾಕಷ್ಟು ಸಮಸ್ಯೆಯೂ ಆಗಬಹುದು. ಹೀಗಾಗಿ ರಾಜ್ಯ ಸರ್ಕಾರ ವರದಿ ಅನುಷ್ಠಾನಕ್ಕೂ ಪೂರ್ವದಲ್ಲಿ ಇನ್ನಷ್ಟು ವಿಚಾರ ಮಾಡಬೇಕಾಗಿದೆ. ಅಲ್ಲದೆ, ಪರಿಸರ ಸೂಕ್ಷ್ಮ ವಲಯ ಘೋಷಣೆ ಮಾಡುವುದು ಸರಿಯಲ್ಲ. ಜನ ವಸತಿಗೆ ಸಮಸ್ಯೆ ನೀಡುವ ಕಾರ್ಯ ಮಾಡಬಾರದು ಎಂದು ಶಾಸಕ ಗುರುರಾಜ ಗಂಟಿಹೊಳೆ ಒತ್ತಾಯಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 24ರ ಬೆಳಗ್ಗೆ 10ಗಂಟೆಯಿಂದ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ನಡೆಯಲಿರುವ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ತಾವೆಲ್ಲರೂ ಈ ಹೋರಾಟದಲ್ಲಿ ಭಾಗವಹಿಸಬೇಕು ಎಂದು ಶಾಸಕರು ಮನವಿ ಮಾಡಿದ್ದಾರೆ.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!