Friday, October 18, 2024

ರಾಮ ವನವಾಸಕ್ಕೆ ತೆರಳಿದಾಗ ಭರತ ಎದುರಿಸಿದ ಸ್ಥಿತಿಯೂ ನನ್ನದಾಗಿದೆ : ಅತಿಶಿ | ಸಿಎಂ ಕುರ್ಚಿಯ ಮೇಲೆ ಕೇಜ್ರಿವಾಲ್‌ ಚಪ್ಪಲಿಗಳನ್ನು ಇಡಬಹುದು : ಪ್ರಶಾಂತ್‌ ಭೂಷಣ್‌ ವ್ಯಂಗ್ಯ

ಜನಪ್ರತಿನಿಧಿ (ನವ ದೆಹಲಿ) : ರಾಜಧಾನಿ ದೆಹಲಿಯ ಮುಖ್ಯಮಂತ್ರಿ ಸ್ಥಾನಕ್ಕೆ ಅರವಿಂದ ಕೇಜ್ರಿವಾಲ್‌ ರಾಜೀನಾಮೆ ನೀಡಿದ ಬಳಿಕ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಅತೀಶಿ ಅವರು ಕೇಜ್ರಿವಾಲ್‌ ಬಳಸುತ್ತಿದ್ದ ಕುರ್ಚಿಯಲ್ಲಿ ಕೂರದೆ, ಪಕ್ಕದಲ್ಲೇ ಇರಿಸಿಕೊಂಡು ಬೇರೊಂದು ಕುರ್ಚಿಯಲ್ಲಿ ಕುಳಿತುಕೊಂಡಿರುವುದು ಈಗ ರಾಷ್ಟ್ರಮಟ್ಟದಲ್ಲಿ ಸುದ್ದಿಗೆ ಕಾರಣವಾಗಿದೆ.

ದೆಹಲಿಯ ನೂತನ ಮುಖ್ಯಮಂತ್ರಿ ಅತಿಶಿ ಅವರ ನಡೆ ಬಗ್ಗೆ ತಮ್ಮ ಅಧಿಕೃತ ಎಕ್ಸ್‌ ಖಾತೆಲಯಲ್ಲಿ ಪ್ರತಿಕ್ರಿಯಿಸಿ ಪೋಸ್ಟ್‌ ಮಾಡಿರುವ ಸುಪ್ರೀಂ ಕೋರ್ಟ್‌ ವಕೀಲ ಪ್ರಶಾಂತ್‌ ಭೂಷಣ್‌, ಅತಿಶಿ ಅವರು ಮುಖ್ಯಮಂತ್ರಿ ಅವರ ಕುರ್ಚಿಯ ಮೇಲೆ ಕೇಜ್ರಿವಾಲ್‌ ಅವರ ಚಪ್ಪಲಿಯನ್ನು ಇಟ್ಟುಕೊಳ್ಳಬಹುದು ಹಾಗೂ ಚಪ್ಪಲಿಗಳು ಸರ್ಕಾರವನ್ನು ನಡೆಸುತ್ತಿವೆ ಎಂದು ಹೇಳಬಹುದು ಎಂದು ವ್ಯಂಗ್ಯವಾಡಿದ್ದಾರೆ.

She might as well keep Kejriwal’s slippers on the CM’s chair : Prashant Bhushan

ಇನ್ನು, ಬಹುಭಾಷಾ ನಟ ಪ್ರಕಾಶ್‌ ರಾಜ್‌ ಕೂಡ ಪ್ರಶಾಂತ್‌ ಭೂಷನ್‌ ವ್ಯಂಗ್ಯಕ್ಕೆ ಲೇವಡಿ ಮಾಡಿದ್ದು, ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಅವರು, ಒಂದೇ ವೈನ್‌ ಬೇರೆ ಬೇರೆ ಬಾಟಲುಗಳಲ್ಲಿ ಎಂಥಾ ಪತನʼ ಎಂದು ಹೇಳಿದ್ದಾರೆ.

Same wine in different bottles : prakash raaj

ಏನಂದಿದ್ದರು ಅತಿಶಿ ?
ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆತಿಶಿ ಅವರು ನಿನ್ನೆ(ಸೋಮವಾರ) ಅಧಿಕಾರ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ, ಹಿಂದಿನ ಮುಖ್ಯಮಂತ್ರಿ ಅರವಿಂದ ಕೇಜ್ರವಾಲ್ ಅವರು ಬಳಸುತ್ತಿದ್ದ ಕುರ್ಚಿಯನ್ನು ಪಕ್ಕದಲ್ಲಿಯೇ ಇಟ್ಟುಕೊಂಡಿದ್ದರು.

ದೆಹಲಿ ಸಚಿವಾಲಯದಲ್ಲಿರುವ ಮುಖ್ಯಮಂತ್ರಿ ಅವರ ಕಚೇರಿಯಲ್ಲಿ ಅತಿಶಿ ಅವರು ಬಿಳಿಬಣ್ಣದ ಕುರ್ಚಿಯಲ್ಲಿ ಆಸೀನರಾಗಿದ್ದರು. ಕೇಜ್ರವಾಲ್ ಬಳಸುತ್ತಿದ್ದ ಕೆಂಪು ಬಣ್ಣದ ಕುರ್ಚಿಯು ಬದಿಯಲ್ಲಿತ್ತು. ದೆಹಲಿಯ ಮುಖ್ಯಮಂತ್ರಿಯ ಹುದ್ದೆಯ ಕುರ್ಚಿಯು ಕೇಜ್ರವಾಲ್‌ಗೆ ಸೇರಿದ್ದಾಗಿದೆ. ಆ ಕುರ್ಚಿಯು ಕೊಠಡಿಯಲ್ಲಿ ಹಾಗೆಯೇ ಇರಲಿದ್ದು, ಅವರಿಗಾಗಿ ಕಾದು ಕೂತಿದೆ’ ಎಂದಿದ್ದರು.

ರಾಮಾಯಣ ಮಹಾಕಾವ್ಯದ ಉದಾಹರಣೆಯನ್ನು ಉಲ್ಲೇಖಿಸಿದ ಅತಿಶಿ, 14 ವರ್ಷಗಳ ಕಾಲ ಶ್ರೀರಾಮ ವನವಾಸಕ್ಕೆ ತೆರಳಿದಾಗ ಆತನ ಸಹೋದರ ಭರತ ಎದುರಿಸಿದ ಸ್ಥಿತಿಯೂ ನನ್ನದಾಗಿದೆ. ಭಗವಾನ್ ಶ್ರೀರಾಮನ ಮರದ ಚಪ್ಪಲಿಗಳನ್ನು ಸಿಂಹಾಸನದ ಮೇಲಿರಿಸಿ, 14 ವರ್ಷಗಳ ಕಾಲ ಅಯೋಧ್ಯೆಯಲ್ಲಿ ಭರತ ಆಡಳಿತ ನಡೆಸಿದಂತೆ ಮುಂದಿನ ನಾಲ್ಕು ತಿಂಗಳ ಕಾಲ ದೆಹಲಿ ಸರ್ಕಾರದ ಆಡಳಿತ ನಡೆಸಲಿದ್ದೇನೆ’ ಎಂದು ಹೇಳಿದ್ದರು.

‘ತಂದೆಯ ಆಸೆಯನ್ನು ಈಡೇರಿಸಿದ್ದರಿಂದಲೇ, ಭಗವಾನ್ ರಾಮನನ್ನು ‘ಮರ್ಯಾದಾ ಪುರುಷೋತ್ತಮ’ ಎಂದು ಕರೆಯಲಾಗುತ್ತದೆ. ಅವರ ಜೀವನ ಘನತೆ ಹಾಗೂ ನೈತಿಕತೆಗೆ ಮಾದರಿಯಾಗಿದೆ. ಇದೇ ಮಾದರಿಯಲ್ಲಿ ಅರವಿಂದ್ ಕೇಜ್ರವಾಲ್ ಕೂಡ ದೇಶದರಾಜಕಾರಣದಲ್ಲಿ ಘನತೆ ಹಾಗೂ ನೈತಿಕತೆಯ ಮಾದರಿಯೊಂದನ್ನು ಸೃಷ್ಟಿಸಿದ್ದಾರೆ’ ಎಂದು ತಿಳಿಸಿದ್ದರು.

ಇದೇ ಸಂದರ್ಭದಲ್ಲಿ ಬಿಜೆಪಿಗೆ ಕೇಜ್ರವಾಲ್ ಅವರ ವರ್ಚಸ್ಸು ಹಾಳು ಮಾಡಲು ಇನ್ನು ಮುಂದೆ ಯಾವುದೇ ಮಾರ್ಗ ಉಳಿದಿಲ್ಲ ಎಂದು ತಿರುಗೇಟು ನೀಡಿದ್ದರು.

Related Articles

Stay Connected

21,961FansLike
3,912FollowersFollow
22,100SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!