Saturday, October 12, 2024

ಸಂಚಾರ ನಿಯಮ ಉಲ್ಲಂಘಿಸುವವರ ಚಾಲನಾ ಪರವಾನಿಗೆ ರದ್ದುಪಡಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ !

ಜನಪ್ರತಿನಿಧಿ (ಬೆಂಗಳೂರು) : ಮದ್ಯ ಸೇವಿಸಿ ವಾಹನ ಚಲಾಯಿಸುವ ಅಥವಾ ಸಂಚಾರ ನಿಯಮ ಉಲ್ಲಂಘಿಸುವವರ ಚಾಲನಾ ಪರವಾನಿಗೆ ರದ್ದುಪಡಿಸಬೇಕೆಂದು ಸಿಎಂ ಸಿದ್ದರಾಮಯ್ಯ ಸಾರಿಗೆ ಇಲಾಖೆಗೆ ಸೂಚನೆ ನೀಡಿದ್ದಾರೆ.

ಆರೋಗ್ಯ ಇಲಾಖೆ, ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ‘ಸಿಎಂ ಆಪತ್ಕಾಲಯಾನ’ ಯೋಜನೆಗೆ ಆಧುನಿಕ‌ ಜೀವರಕ್ಷಕ ಸವಲತ್ತುಗಳಿರುವ 65 ಆಂಬುಲೆನ್ಸ್‌ಗಳನ್ನು ನೀಡಿದ ಬಳಿಕ ಅವರು ಮಾತನಾಡಿದರು.

ಕಟ್ಟುನಿಟ್ಟಾದ ಸಂಚಾರ ನಿಯಮಗಳಿದ್ದರೂ, ಅನೇಕರು ಸಂಚಾರ ಸಾರಿಗೆ ನಿಯಮಗಳನ್ನು ಉಲ್ಲಂಘಿಸುತ್ತಿದ್ದಾರೆ. ಕೆಲವರ ನಿರ್ಲಕ್ಷ್ಯದಿಂದ ಅನೇಕ ಅಮಾಯಕರು ಪ್ರಾಣ ಕಳೆದುಕೊಳ್ಳುವಂತಾಗುತ್ತಿದೆ. ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಹೆಚ್ಚಿನ ಪ್ರಮಾಣದಲ್ಲಿ ಅಪಘಾತಗಳನ್ನು ತಡೆಯಬಹುದು ಎಂದು ಹೇಳಿದರು.

ಕುಡಿದು ವಾಹನ ಚಲಾಯಿಸುವ ಮತ್ತು ಚಾಲನೆ ಮಾಡುವಾಗ ಮೊಬೈಲ್ ಫೋನ್ ಬಳಕೆಗೆ ಕಠಿಣ ಶಿಕ್ಷೆಯಾಗಬೇಕು. ಸಂಚಾರ ನಿಯಮ ಉಲ್ಲಂಘಿಸುವವರಿಗೆ ಪರವಾನಗಿ ರದ್ದುಗೊಳಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಇದೇ ಸಂದರ್ಭದಲ್ಲಿ ಸಿಎಂ ಸೂಚಿಸಿದರು.

ಅಪಘಾತದ ಬಳಿಕ ‘ಗೋಲ್ಡನ್ ಅವರ್’ ಜೀವ ಉಳಿಸುವಲ್ಲಿ ನಿರ್ಣಾಯಕವಾಗಿದ್ದು, ಹೊಸದಾಗಿ ಆರಂಭಿಸಲಾದ ಆಂಬ್ಯುಲೆನ್ಸ್‌ಗಳು ಪ್ರಥಮ ಚಿಕಿತ್ಸೆ ಹಾಗೂ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸುವ ಕೆಲಸ ಮಾಡುತ್ತದೆ ಎಂದು ತಿಳಿಸಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಮಾತನಾಡಿ, ಆಂಬ್ಯುಲೆನ್ಸ್‌ಗಳು ಅಗತ್ಯ ವೈದ್ಯಕೀಯ ಉಪಕರಣಗಳನ್ನು ಹೊಂದಿದ್ದು, ಸೂಕ್ತ ಸಮಯಕ್ಕೆ ಚಿಕಿತ್ಸೆ ಒದಗಿಸುತ್ತವೆ. 65 ಹೊಸ ಆಂಬ್ಯುಲೆನ್ಸ್‌ಗಳಲ್ಲಿ 26 ವೆಂಟಿಲೇಟರ್‌ಗಳು ಹಾಗೂ ಡಿಫಿಬ್ರಿಲೇಟರ್‌ಗಳನ್ನು ಒಳಗೊಂಡಂತೆ ಸುಧಾರಿತ ಜೀವ-ಬೆಂಬಲ ವ್ಯವಸ್ಥೆಯನ್ನು ಹೊಂದಿದೆ. ಮೊದಲ ಹಂತದಲ್ಲಿ ಎಂಟು ಜಿಲ್ಲೆಗಳ 65 ಸ್ಥಳಗಳನ್ನು ಗುರುತಿಸಲಾಗಿದ್ದು ಹಂತಹಂತವಾಗಿ ರಾಜ್ಯದ ಎಲ್ಲಡೆ ಇಂತಹ ಆಂಬುಲೆನ್ಸ್‌ ಪೂರೈಸಲಾಗುತ್ತದೆ ಎಂದು ಹೇಳಿದರು.

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!