spot_img
Thursday, April 2, 2026
spot_img

ಮುಡಾ ಹಗರಣ : ಸಿದ್ದರಾಮಯ್ಯನವರೇ ರಾಜೀನಾಮೆ ನೀಡಿ, ತನಿಖೆ ಎದುರಿಸಿ : ರಾಜ್ಯ ಬಿಜೆಪಿ ಒತ್ತಾಯ

ಜನಪ್ರತಿನಿಧಿ (ಬೆಂಗಳೂರು) : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ಜಾಗ ಹಂಚಿಕೆ ಪ್ರಕರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್‌ ವಜಾಗೊಳಿಸಿ ಇಂದು(ಮಂಗಳವಾರ) ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಆದೇಶಿಸಿರುವ ಬೆನ್ನಿಗೆ ರಾಜ್ಯ ಬಿಜೆಪಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದೆ.

ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹೈಕೋರ್ಟ್‌ನ ತೀರ್ಪನ್ನು ಸ್ವಾಗತಿಸಿದ ರಾಜ್ಯ ಬಿಜೆಪಿ, ಬಡವರ ನಿವೇಶನ ಕಬಳಿಸಿ, ಲಜ್ಜೆಬಿಟ್ಟು ಸಿಎಂ ಹುದ್ದೆಯಲ್ಲಿ ಮುಂದುವರಿಯುತ್ತಿರುವ ಸಿದ್ದರಾಮಯ್ಯ ನವರೇ ಒಂದು ಕ್ಷಣವೂ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುವ ನೈತಿಕತೆಯನ್ನು ಇಂದು ತಾವು ಉಳಿಸಿಕೊಂಡಿಲ್ಲ. ರಾಜೀನಾಮೆ ನೀಡಿ, ತನಿಖೆ ಎದುರಿಸಿ ಎಂದು ಆಗ್ರಹಿಸಿದೆ.

ನೀವು ಕಟ್ಟಿರುವ ಸುಳ್ಳಿನ ಸಾಮ್ರಾಜ್ಯ ಸಂಪೂರ್ಣ ಕುಸಿದಿದೆ ಇನ್ನು ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ರಾಜ್ಯ ಬಿಜೆಪಿ ಒತ್ತಾಯಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!