spot_img
Sunday, February 15, 2026
spot_img

ಟೆನ್ನಿಕೋಯಿಟ್ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ : ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಸರಸ್ವತಿ  ಪದವಿ ಪೂರ್ವ ಕಾಲೇಜು ಗಂಗೊಳ್ಳಿ  ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ  ವಿಭಾಗದ ಬಾಲಕ – ಬಾಲಕಿಯರ ಟೆನ್ನಿ ಕೋಯಿಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.
ವಿದ್ಯಾರ್ಥಿನಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ   ವಿಶೇಷ ತರಬೇತಿ ನೀಡಿ  ವಿದ್ಯಾರ್ಥಿಗಳ  ಸಾಧನೆಗೆ ಉತ್ತೇಜನ ನೀಡಿದ್ದಾರೆ.
  ಶೈಕ್ಷಣಿಕ ಸಾಧನೆಯ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿ ಕೂಡ ಕಾಲೇಜು ಸಾಧನೆಯ ಪಥದಲ್ಲಿ ಸಾಗಿ ಬರುತ್ತಿದೆ. ವಿದ್ಯಾರ್ಥಿಗಳೊಂದಿಗೆ ಕಾಲೇಜು ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್,  ದೈಹಿಕ ಶಿಕ್ಷಣ ಉಪನ್ಯಾಸಕ  ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದಾರೆ.
 ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!