Sunday, October 13, 2024

ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗಿಯಾಗಿ ದೇಶಕ್ಕೆ ಮರಳಿದ ಪಿಎಂ ಮೋದಿ !

ಜನಪ್ರತಿನಿಧಿ (ನವದೆಹಲಿ) : ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದಿನಗಳ “ಯಶಸ್ವಿ” ಮತ್ತು ‘ಗಮನಾರ್ಹ’ ಅಮೆರಿಕ ಪ್ರವಾಸ ಮುಗಿಸಿ ದೆಶಕ್ಕೆ ಮರಳಿದ್ದಾರೆ.

ಅಮೆರಿಕ ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ಮೋದಿ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗಿಯಾಗಿದ್ದರು. ಬಳಿಕ ವಿಶ್ವಸಂಸ್ಥೆಯ ‘ಭವಿಷ್ಯದ ಶೃಂಗಸಭೆ’ಯಲ್ಲಿ ಭಾಗವಹಿಸಿದ್ದರು ಮತ್ತು ಹಲವಾರು ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಿದರು.

ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಿದ್ದರು. ಅಲ್ಲದೆ ಅಮೆರಿಕದಲ್ಲಿ ಸಿಖ್‌ ಸಮುದಾಯದ ಹಲವಾರು ಸದಸ್ಯರನ್ನು ಪ್ರಧಾನಿ ಮೋದಿ ಭೇಟಿ ಮಾಡಿದ್ದಾರೆ.

ಇನ್ನು ಅಮೆರಿಕ ಭೇಟಿಯ ನೆನಪುಗಳನ್ನು ಎಕ್ಸ್ ನಲ್ಲಿ ಹಂಚಿಕೊಂಡಿರುವ ಮೋದಿ, ಈ ಭೇಟಿ “ಫಲದಾಯಕ”, ವೈವಿಧ್ಯಮಯ ಕಾರ್ಯಕ್ರಮಗಳನ್ನು ಒಳಗೊಂಡಿದೆ ಮತ್ತು ಗ್ರಹವನ್ನು ಉತ್ತಮಗೊಳಿಸುವ ಗುರಿ ಹೊಂದಿರುವ ವಿಷಯಗಳ ಸರಣಿಯ ಮೇಲೆ ಕೇಂದ್ರೀಕರಿಸಿದೆ ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 21ರಂದು ವಿಲ್ಮಿಂಗ್ಟನ್‌ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆ ಸೇರಿದಂತೆ ಹಲವು ನಾಯಕರೊಂದಿಗೆ ನಡೆದ ದ್ವಿಪಕ್ಷೀಯ ಸಭೆಗಳ ಸಂಕ್ಷಿಪ್ತ ವಿಡಿಯೋವನ್ನು ಪ್ರಧಾನಿ ಹಂಚಿಕೊಂಡಿದ್ದಾರೆ.

This has been a fruitful USA visit : Narendra modi

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!