spot_img
Wednesday, April 1, 2026
spot_img

ಮುಂದಿನ ಪೀಳಿಗೆಗೆ ನಮ್ಮ ಸನಾತನ ಸಂಸ್ಕೃತಿಯ ಸ್ವಾಭಿಮಾನ ಬೆಳೆಸಬೇಕು : ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ

ಜನಪ್ರತಿನಿಧಿ (ಉಡುಪಿ) : ನಮ್ಮ ಮುಂದಿನ ಪೀಳಿಗೆಗೆ ನಮ್ಮ ಸನಾತನ ಸಂಸ್ಕೃತಿಯ ಸ್ವಾಭಿಮಾನ ಬೆಳೆಸುವಂತೆ ಮಾಡಬೇಕು. ಹಿಂದೂ ಸಮಾಜದ ತಳಪಾಯವನ್ನು ಭದ್ರವಾಗಿ ನಿರ್ಮಿಸುವ ಹೊಣೆಗಾರಿಕೆಯನ್ನು ನಾವೆಲ್ಲರೂ ಪೂರೈಸಬೇಕಿದೆ ಎಂದು ಪಡುಕುತ್ಯಾರು ಆನೆಗುಂದಿ ಸಂಸ್ಥಾನ ಸರಸ್ವತಿ ಪೀಠದ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದರು.

ಚಾತುರ್ಮಾಸ ವ್ರತಾಚರಣೆಯ ಸಮಾರೋಪ ಧಾರ್ಮಿಕ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ದಕ್ಷಿಣ ಕನ್ನಡ ಸಂಸದ ಕ್ಯಾಪಟ್ನ್‌ ಬ್ರಿಜೇಶ್‌ ಚೌಟ, ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಉಡುಪಿ ಶಾಸಕ ಯಶಪಾಲ್‌ ಸುವರ್ಣ ಶುಭ ಹಾರೈಸಿದರು. ಆಸ್ಥಾನ ವಿದ್ವಾಂಸ ಶಂಕರಾಚಾರ್ಯ ಕಡ್ಲಾಸಕರ್‌ ಪಂಡಿತ್‌ ಹುಬ್ಬಳ್ಳಿ ಸಭೆಯನ್ನು ಉದ್ದೇಶಿಸಿ ಮಾತನಾಡಿ, ʼಗುರುವಿನ ಮಂತ್ರಾಕ್ಷತೆ ಮಾತ್ರದಿಂದಲೇ ಜೀವನ ಪಾವನವಾಗುತ್ತದೆ ಎಂದು ಹೇಳಿದರು.

ಆನೆಗುಂದಿ ಪ್ರತಿಷ್ಠಾನದ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಶ್ವಕರ್ಮ ಸಹಕಾರ ಬ್ಯಾಂಕ್‌ ಅಧ್ಯಕ್ಷ ಹರೀಶ್‌ ಆಚಾರ್ಯ, ಉದ್ಯಮಿ ಡಾ. ಜಿ ರಾಮಕೃಷ್ಣ ಆಚಾರ್‌, ಬೆಂಗಲೂರು ವಿಶ್ವಕರ್ಮ ಸೇವಾ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಡಾ. ಬಿ.ಎಂ ಉಮೇಶ್‌ ಕುಮಾರ್‌, ರಥ ಶಿಲ್ಪಿ ರಾಜಗೋಪಾಲ ಆಚಾರ್ಯ ಕೋಟೇಶ್ವರ, ಚಾತುರ್ಮಾಸ್ಯ ವ್ರತ ನಿರ್ವಹಣಾ ಸಮಿತಿಯ ಗೌರವ ಅಧ್ಯಕ್ಷ ಪಿ.ವಿ ಗಂಗಾಧರ ಆಚಾರ್ಯ ಸೇರಿ ಮತ್ತಿತರ ಪ್ರಮುಖರು ಈ ಸಂದರ್ಭ ಉಪಸ್ಥಿತರಿದ್ದರು.

ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್‌ ಎಂ.ಬಿ ಆಚಾರ್‌ ಕಂಬಾರು ಸ್ವಾಗತಿಸಿ, ಕೋಶಾಧಿಕಾರಿ ಅರವಿಂದ ವೈ ಆಚಾರ್ಯ ಬೆಳುವಾಯಿ ವಂದಿಸಿದರು. ಕೆ.ಎಂ ಗಂಗಾಧರ ಆಚಾರ್ಯ ಹಾಗೂ ಗೀತಾಚಂದ್ರ ಆಚಾರ್ಯ ಕಾರ್ಕಳ, ಮೌನೇಶ್‌ ಶರ್ಮಾ ಪಡುಕುತ್ಯಾರು ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!