spot_img
Saturday, February 14, 2026
spot_img

ಮುಡಾ ಹಗರಣ | ಸಿಎಂ ವಿರುದ್ಧ ಯಾವ ಕಾಯ್ದೆಯಡಿ ತನಿಖೆ ನಡೆಸಬೇಕು : ಜಿಜ್ಞಾಸೆ ವ್ಯಕ್ತಪಡಿಸಿದ ನ್ಯಾಯಾಲಯ

ಜನಪ್ರತಿನಿಧಿ (ಬೆಂಗಳೂರು ) : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಕ್ರಮ ನಿವೇಶನ ಹಂಚಿಕೆ ನಡೆದಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧದ ಕ್ರಿಮಿನಲ್‌ ಪ್ರಕರಣದ ತನಿಖೆಯನ್ನು ಭಾರತೀಯ ದಂಡ ಸಂಹಿತೆ (ಐಪಿಸಿ) ಕಾಯ್ದೆ ಅಡಿಯಲ್ಲಿ ನಡೆಸಬೇಕೋ ಅಥವಾ ಭಾರತೀಯ ನ್ಯಾ ಸುರಕ್ಷಾ ಸಂಹಿತೆ(ಬಿಎನ್‌ಎಸ್‌ಎಸ್)‌ ಕಾಯ್ದೆ ಅಡಿಯಲ್ಲಿ ನಡೆಸಬೇಕೋ ಎನ್ನುವ ಜಿಜ್ಞಾಸೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವ್ಯಕ್ತಪಡಿಸಿರುವ ಸಂಗತಿ ನಡೆದಿದೆ.

ಹೈಕೋರ್ಟ್‌ ನ ಏಕಸದಸ್ಯ ನ್ಯಾಯಪೀಠದ ತೀರ್ಪಿನ ಅನುಸಾರ ಸಿಎಂ ಸಿದ್ದರಾಮಯ್ಯ ವಿರುದ್ಧ ದಾಖಲಾಗಿರುವ ಖಾಸಗಿ ದೂರಿನ ಉಲ್ಲೇಖಿತ ಅಪರಾಧಿಕ ಕಲಂಗಳನ್ನು ಪರಿಗಣಿಸಿ ಆರೋಪಿ ವಿರುದ್ಧ ತನಿಖೆ ನಿರ್ದೇಶಿಸಬೇಕು ಎಂದು ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಅವರ ಪರ ವಕೀಲೆ ಲಕ್ಷ್ಮೀ ಅಯ್ಯಂಗಾರ್‌ ಇಂದು(ಬುಧವಾರ), ʼಶಾಸಕರು- ಸಂಸದರ ವಿರುದ್ಧ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆʼಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್‌ ಅವರಿಗೆ ಮನವಿ ಮಾಡಿದರು.

ಇನ್ನು, ನಿನ್ನೆ(ಮಂಗಳವಾರ)ಯಷ್ಟೇ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಹಾಗೂ ತನಿಖೆಗೆ ಒಪ್ಪಿಗೆ ನೀಡಿರುವ ಹೈಕೋರ್ಟ್‌ ನ ಏಕಸದಸ್ಯ ನ್ಯಾಯಪೀಠದ ತೀರ್ಪನ್ನು ನ್ಯಾಯಾಧೀಶರಿಗೆ ವಕೀಲೆ ಲಕ್ಷ್ಮೀ ಅಯ್ಯಂಗಾರ್‌ ಅವರು ಸಲ್ಲಿಸಿದರು.

ವಾದವನ್ನು ಆಲಿಸಿದ ನ್ಯಾಯಾಧೀಶರು ʼಈ ಖಾಸಗಿ ದೂರನ್ನು ಯಾವ ಕಾಯ್ದೆ ಅಡಿಯಲ್ಲಿ ಪರಿಗಣಿಸಿ ಆದೇಶ ನೀಡಬೇಕು ಎನ್ನುವ ಜಿಜ್ಞಾಸೆ ಇದೆ ಎಂಬ ಮೌಖಿಕ ಅಭಿಪ್ರಾಯ ಮಂಡಿಸಿ ವಿಚಾರಣೆಯನ್ನು ಮುಂದೂಡಿದ್ದಾರೆ ಎಂದು ತಿಳಿದು ಬಂದಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಮಾಜಿ ಶಾಸಕ, ಜಿಲ್ಲೆಯ ಧಾರ್ಮಿಕ ಮುಂದಾಳು ಬಿ.ಅಪ್ಪಣ್ಣ ಹೆಗ್ಡೆ ಇನ್ನಿಲ್ಲ

kundapura: ಮಾಜಿ ಶಾಸಕ, ಉಡುಪಿ ಜಿಲ್ಲೆಯ ಧಾರ್ಮಿಕ ಮುಂದಾಳು, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಗ್ರಮೇವ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನೂ ನೆನಪು ಮಾತ್ರ. ಫೆ.7ಶನಿವಾರ (ಇಂದು ಬೆಳಿಗ್ಗೆ) ಅವರು ವಯೋಸಹಜ ಕಾರಣದಿಂದ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!