spot_img
Wednesday, April 1, 2026
spot_img

ನಂದಿನಿ ಬ್ರ್ಯಾಂಡ್‌ ಹೊರತುಪಡಿಸಿ ಎಲ್ಲಾ ಬ್ರ್ಯಾಂಡ್‌ಗಳ ತುಪ್ಪದ ತಪಾಸಣೆಗೆ ರಾಜ್ಯ ಸರ್ಕಾರ ಆದೇಶ !

ಜನಪ್ರತಿನಿಧಿ (ಬೆಂಗಳೂರು) : ತಿರುಪತಿ ದೇವಸ್ಥಾನದ ಭಕ್ತಿರಿಗೆ ಪ್ರಸಾದದ ರೂಪದಲ್ಲಿ ನೀಡುವ ಲಡ್ಡಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಪತ್ತೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ದೇಶವ್ಯಾಪಿ ತುಪ್ಪದ ಬ್ರ್ಯಾಂಡ್‌ ಗಳ ಬಗ್ಗೆ ಅನುಮಾನ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.  ‌

ನಂದಿನಿ ಬ್ರ್ಯಾಂಡ್‌ ಹೊರತುಪಡಿಸಿ ಎಲ್ಲ ಸಂಸ್ಥೆಗಳ ತುಪ್ಪದ ಮಾದರಿಗಳನ್ನು ಸಂಗ್ರಹಿಸಿ ತಪಾಸಣೆಗೆ ಒಳಪಡಿಸುವಂತೆ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ ಸೂಚನೆ ನೀಡಿರುವುದಾಗಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಮಾರಾಟ ಆಗುತ್ತಿರುವ ನಂದಿನಿ ತುಪ್ಪವನ್ನು ಬಿಟ್ಟು, ಇತರ ಎಲ್ಲ ತುಪ್ಪಗಳ ಮಾದರಿ ಸಂಗ್ರಹಿಸಿ, ಪರಿಶೀಲಿಸಿ ಗುಣಮಟ್ಟ ಕಾಪಾಡಲು ಸೂಚಿಸಲಾಗಿದೆ. ದೇವಸ್ಥಾನಗಳಲ್ಲಿ ಕೊಡುವ ಪ್ರಸಾದಗಳ ಮಾದರಿ ಪರೀಕ್ಷಿಸುವ ಬದಲು, ಬಳಸುವ ತುಪ್ಪದ ಪರಿಶೀಲನೆ ಕೈಗೊಳ್ಳುವಂತೆ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!