Saturday, October 12, 2024

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿ ನ್ಯಾಯಾಲಯ ಆದೇಶ

ಜನಪ್ರತಿನಿಧಿ (ಬೆಂಗಳೂರು) : : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಕ್ರಮ ನಿವೇಶನ ಹಂಚಿಕೆ ನಡೆದಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧದ ಕ್ರಿಮಿನಲ್‌ ಪ್ರಕರಣದ ತನಿಖೆಯನ್ನು ಲೋಕಾಯುಕ್ತಕ್ಕೆ ವಹಿಸಿ  ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದೆ.

ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿ ಅಕ್ರಮವಾಗಿ ನಿವೇಶನ ಹಂಚಿಕೆ ಮಾಡಲಾಗಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್​ ಅನ್ನು ಹೈಕೋರ್ಟ್​ನ ಏಕ ಸದಸ್ಯ ನ್ಯಾಯಪೀಠ ನಿನ್ನೆ(ಮಂಗಳವಾರ) ಎತ್ತಿ ಹಿಡಿದಿತ್ತು.

ಈಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಆದೇಶ ನೀಡಿ ಆದೇಶಿಸಿದೆ. ಹಗರಣಕ್ಕೆ ಸಂಬಂಧಿಸಿದಂತೆ ಆರು ವಾರಗಳ ಒಳಗಾಗಿ ಸಿಆರ್​ಪಿಸಿ ಸೆ.156(3) ಅಡಿ ತನಿಖೆ ನಡೆಸಿ 3 ತಿಂಗಳೊಳಗೆ ವರದಿ ಸಲ್ಲಿಸುವಂತೆ ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ನ್ಯಾಯಾಲಯ ಸೂಚನೆ ನೀಡಿ ಆದೇಶಿಸಿದೆ.

ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ಎಸಗಲಾಗಿದೆ ಎಂಬ ಆರೋಪದ ಮೇಲೆ ತನಿಖೆ ನಡೆಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ನೀಡಿದ್ದ ಅನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದ ಮರುದಿನವೇ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ನೇತೃತ್ವದ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶ ಹೊರಬಿದ್ದಿದೆ.

ಮುಖ್ಯಮಂತ್ರಿ ವಿರುದ್ಧದ ದೂರುಗಳ ತೀರ್ಪನ್ನು ಮುಂದೂಡುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರ್ದೇಶನ ನೀಡಿದ್ದ ಆಗಸ್ಟ್ 19ರ ಮಧ್ಯಂತರ ಆದೇಶವನ್ನು ಹೈಕೋರ್ಟ್ ತೆರವು ಮಾಡಿದ್ದು, ತನಿಖೆಗೆ ಆದೇಶಿಸಲು ಹಸಿರು ನಿಶಾನೆ ತೋರಿದೆ.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಪಾತ್ರದ ಬಗ್ಗೆ ತನಿಖೆಯ ಅಗತ್ಯವಿದೆ ಎಂದು ಮೈಸೂರಿನ ಸ್ನೇಹಮಯಿ ಕೃಷ್ಣ ಮತ್ತು ಟಿಜೆ ಅಬ್ರಾಹಂ ಸಲ್ಲಿಸಿದ್ದ ಖಾಸಗಿ ದೂರುಗಳ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತು.

ರಾಜ್ಯಪಾಲರ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್​ ತನ್ನ ವಿಚಾರಣೆ ಮುಕ್ತಾಯವಾಗುವವರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಕಾಯ್ದಿರಿಸಿತ್ತು.

Special Court in Bengaluru passes an order for investigation against Karnataka CM Siddaramaiah by competent authority in Karnataka Lokyukta in MUDA case

Related Articles

Stay Connected

21,961FansLike
3,912FollowersFollow
22,000SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img

Latest Articles

error: Content is protected !!