spot_img
Wednesday, April 1, 2026
spot_img

ಶಿರೂರು ಗುಡ್ಡ ಕುಸಿತ : ಕೇರಳ ಮೂಲದ ಲಾರಿ ಚಾಲಕ ಅರ್ಜುನ್‌ ಮೃತದೇಹ ಪತ್ತೆ !

ಜನಪ್ರತಿನಿಧಿ (ಶಿರೂರು) : ಉತ್ತರ ಕನ್ನಡಸ ಶಿರೂರಿನಲ್ಲಿ ಸಂಭವಿಸಿದ ಭಾರಿ ಗುಡ್ಡ ಕುಸಿತವಾಗಿ ಎರಡು ತಿಂಗಳು ಕಳೆದಿದ್ದು, ಕೊನೆಗೂ ನಾಪತ್ತೆಯಾಗಿದ್ದ ಕೇರಳದ ಮೂಲದ ಲಾರಿ ಮತ್ತು ಲಾರಿ ಚಾಲಕ ಅರ್ಜುನ್‌ ಮೃತದೇಹ  ಇಂದು(ಬುಧವಾರ,ಸೆ.25) ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಲಾರಿ ಹಾಗೂ ಲಾರಿ ಚಾಲಕ ಅರ್ಜುನ್‌ ಪತ್ತೆಗಾಗಿ ಕಳೆದ 6  ದಿನಗಳಿಂದ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಕಾರ್ಯಾಚರಣೆಯಲ್ಲಿ ಗಂಗಾವಳಿ ನದಿಯಲ್ಲಿ ಮುಳುಗಿರುವ ಲಾರಿ ಪತ್ತೆಯಾಗಿತ್ತು. ಲಾರಿಯೊಳಗೆ ಅರ್ಜುನ್‌ ಅವರ ಮೃತದೇಹ ಪತ್ತೆಯಾಗಿದೆ ಎಂದು ಸುದ್ದಿ ಮೂಲಗಳು ತಿಳಿಸಿವೆ.

ಕೇರಳ ಮೂಲದ ಲಾರಿಯ ಮಾಲೀಕ ಮನಾಫ್‌ ಇದು ತಮ್ಮದೆ ಲಾರಿಯೆಂದು ಗುರುತಿಸಿದ್ದು, ಲಾರಿಯೊಳಗೆ ಮೃತದೇಹ ಪತ್ತೆಯಾಗಿದೆ. ಇದು ಅರ್ಜುನ್‌ ಅವರ ಮೃತದೇಹವೆಂದು ಸ್ಪಷ್ಟಪಡಿಸಿರುವುದಾಗಿ ಸುದ್ದಿ ಮೂಲ ವಿವರಿಸಿದೆ. ಇವರ ಜೊತೆ ಸ್ಥಳೀಯ ಜಗನ್ನಾಥ ಮತ್ತು ಲೋಕೇಶ್ ಕಣ್ಮರೆಯಾಗಿದ್ದು ಅವರ ಶೋಧ ಕಾರ್ಯ ಮುಂದುವರೆದಿದೆ ಎಂದು ಮಾಹಿತಿ ಲಭ್ಯವಾಗಿದೆ.

ಕಳೆದ ಜು.16ರಂದು ರಾಜ್ಯದಾದ್ಯಂತ ಭಾರಿ ಮಳೆಯಾಗಿತ್ತು. ಕ್ಷಣಬಿಡದೆ ಸುರಿದ ಮಳೆಯ ಪರಿಣಾಮ ಶಿರೂರಿನ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿ ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು 10 ಮಂದಿ ಮೃತ್ಪಟ್ಟಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
- Advertisement -spot_img
error: Content is protected !!